Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:8 - ಕನ್ನಡ ಸತ್ಯವೇದವು C.L. Bible (BSI)

8 ಅವರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದರು. “ನೀವು ಯಾರು? ಎಲ್ಲಿಯವರು?” ಎಂದು ಆತ ವಿಚಾರಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಯೆಹೋಶುವನಿಗೆ “ನಾವು ನಿಮ್ಮ ದಾಸರು” ಎಂದರು. ಯೆಹೋಶುವನು ಅವರನ್ನು “ನೀವು ಯಾರು? ಎಲ್ಲಿಯವರು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಯೆಹೋಶುವನಿಗೆ - ನಾವು ನಿನ್ನ ದಾಸರಾಗಿದ್ದೇವೆನ್ನಲು ಅವನು ಅವರನ್ನು - ನೀವು ಯಾರು, ಎಲ್ಲಿಯವರು ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಿವ್ವಿಯರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದು ಹೇಳಿದರು. ಆದರೆ ಯೆಹೋಶುವನು, “ನೀವು ಯಾರು? ಎಲ್ಲಿಂದ ಬಂದಿರುವಿರಿ?” ಎಂದು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕವರು ಯೆಹೋಶುವನಿಗೆ, “ನಾವು ನಿನ್ನ ಸೇವಕರು,” ಎಂದರು. ಆಗ ಯೆಹೋಶುವನು ಅವರಿಗೆ, “ನೀವು ಯಾರು? ಎಲ್ಲಿಂದ ಬಂದಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:8
9 ತಿಳಿವುಗಳ ಹೋಲಿಕೆ  

ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರು ಎಲ್ಲರು ಕೂಡಿ ಯೇಹುವಿಗೆ, “ನಾವು ನಿಮ್ಮ ಆಜ್ಞಾಧಾರಕರಾದ ಸೇವಕರು, ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ; ನಿಮ್ಮ ಚಿತ್ತವೇ ನೆರವೇರಲಿ,” ಎಂದು ಹೇಳಿಕಳುಹಿಸಿದರು.


ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀ ಕೆಲಸವನ್ನು ಮಾಡುವ ಗುಲಾಮರಾಗಬೇಕು.


ಅವರು ನಮ್ಮನ್ನು ಇಲ್ಲಿಗೆ ಕಳಿಸುತ್ತಾ, ‘ನೀವು ಪ್ರಯಾಣಕ್ಕಾಗಿ ಬುತ್ತಿ ಕಟ್ಟಿಕೊಂಡು ಹೋಗಿ ಇಸ್ರಯೇಲರನ್ನು ಎದುರುಗೊಳ್ಳಿ - ನಾವು ನಿಮ್ಮ ಸೇವಕರು, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಿ ಎಂದು ವಿನಂತಿಸಿ,’ ಎಂದು ಹೇಳಿದರು.


ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ.


ಇಗೋ, ಈಗ ನಾವು ನಿಮ್ಮ ಕೈಯಲ್ಲಿ ಇದ್ದೇವೆ. ನಿಮಗೆ ಯಾವುದು ಒಳ್ಳೆಯದು, ನ್ಯಾಯವಾದುದು ಎಂದು ತೋರುತ್ತದೋ ಅದರಂತೆ ನಮಗೆ ಮಾಡಿ,” ಎಂದು ಉತ್ತರಕೊಟ್ಟರು.


ಇದರಿಂದಾಗಿ ನೀವು ಶಾಪಗ್ರಸ್ತರು! ನೀವು ಯಾವಾಗಲೂ ಊಳಿಗದವರಾಗಿದ್ದು, ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಬೇಕು,” ಎಂದನು.


ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡಬೇಡಿ, ಬೇಗನೆ ಬಂದು ಸಹಾಯ ಮಾಡಿ. ನಮಗೆ ವಿರುದ್ಧ ಕೂಡಿಬಂದಿರುವ ಈ ಬೆಟ್ಟದ ಸೀಮೆಯ ಎಲ್ಲ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿ,” ಎಂದು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು