Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:1 - ಕನ್ನಡ ಸತ್ಯವೇದವು C.L. Bible (BSI)

1 ಒಂದು ದಿನ ಅಮಿತ್ತಾಯನ ಮಗನಾದ ಯೋನನಿಗೆ ಸರ್ವೇಶ್ವರಸ್ವಾಮಿಯ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಅಮಿತ್ತೈಯನ ಮಗನಾದ ಯೋನನಿಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಅವಿುತ್ತೈಯ ಮಗನಾದ ಯೋನನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಮಿತ್ತೈಯ ಮಗನಾದ ಯೋನನಿಗೆ ಯೆಹೋವನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ವಾಕ್ಯವು ಅಮಿತ್ತೈಯನ ಮಗ ಯೋನನಿಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:1
7 ತಿಳಿವುಗಳ ಹೋಲಿಕೆ  

ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ಇಸ್ರಯೇಲ್ ದೇವರಾದ ಸರ್ವೇಶ್ವರ, ತನ್ನ ಸೇವಕನೂ ಗತ್ ಹೇಫೆರಿವನಾದ ಅಮಿತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರ ಮುಂತಿಳಿಸಿದಂತೆ, ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಯೇಲರ ಮೇರೆಯನ್ನು ತಿರುಗಿ ತೆಗೆದುಕೊಂಡವನು ಇವನೇ.


ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.


ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”


ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು