10 ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. “ಎಂಥಾ ತಪ್ಪುಮಾಡಿದೆ!” ಎಂದು ಅವನನ್ನು ಖಂಡಿಸಿದರು.
10 ಇವನು ಯೆಹೋವನ ಸನ್ನಿಧಿಯಿಂದ ಓಡಿಬಂದವನು ಎಂಬದನ್ನು ಅವನು ಮೊದಲು ಹೇಳಿದ ಒಂದು ಮಾತಿನಿಂದ ಆ ಜನರು ತಿಳುಕೊಂಡಿದ್ದರು. ಈಗ ಇದನ್ನೂ ಕೇಳಿ ಬಹಳವಾಗಿ ಹೆದರಿ - ಇದೇನು ನೀನು ಮಾಡಿದ್ದು ಅಂದರು.
10 ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕೃತ್ಯ ಮಾಡಿರುವೆ?” ಎಂದು ಕೇಳಿದರು.
10 ಆಗ ಆ ಮನುಷ್ಯರು ಬಹಳ ಭಯಪಟ್ಟು, “ನೀನು ಏನು ಮಾಡಿದ್ದೀ?” ಎಂದು ಅವನನ್ನು ಕೇಳಿದರು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಅವನು ಓಡಿ ಹೋಗುತ್ತಿದ್ದಾನೆಂದು ಆ ಮನುಷ್ಯರಿಗೆ ತಿಳಿದಿತ್ತು. ಏಕೆಂದರೆ ಅವನೇ ಇದನ್ನು ಅವರಿಗೆ ಹೇಳಿದ್ದನು.
ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.
ಆಗ ಯೋವಾಬನು, “ನನ್ನ ಒಡೆಯರಾದ ತಮ್ಮ ಆಯುಷ್ಕಾಲದಲ್ಲೇ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯರಾದ ಅರಸರು ಈ ಕಾರ್ಯಕ್ಕೆ ಮನಸ್ಸುಮಾಡಿದ್ದೇಕೆ?” ಎಂದನು.
ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು.