Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:12 - ಕನ್ನಡ ಸತ್ಯವೇದವು C.L. Bible (BSI)

12 ಯೋನನು: “ನನ್ನನ್ನು ಎತ್ತಿ ಸಮುದ್ರಕ್ಕೆ ಎಸೆಯಿರಿ. ಆಗ ಅದು ಶಾಂತವಾಗುವುದು. ನೀವು ಇಂಥ ಭೀಕರ ಬಿರುಗಾಳಿಗೆ ತುತ್ತಾಗಲು ನಾನೇ ಕಾರಣ. ಇದನ್ನು ನಾನು ಚೆನ್ನಾಗಿ ಬಲ್ಲೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೋನನು ಅವರಿಗೆ “ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ಆಗ ಸಮುದ್ರವು ಶಾಂತವಾಗುವುದು; ಈ ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ನಿಮ್ಮ ಮೇಲೆ ಎದ್ದಿರುವ ಸಮುದ್ರವು ಶಾಂತವಾಗುವದು; ಈ ದೊಡ್ಡ ತುಫಾನು ನಿಮಗೆ ಸಂಭವಿಸಿದ್ದು ನನ್ನ ನಿವಿುತ್ತವೇ ಎಂಬದು ನನಗೆ ಗೊತ್ತು ಎಂದುತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೋನನು, “ಈ ಬಿರುಗಾಳಿಗೆ ನಾನೇ ಕಾರಣ. ಈಗ ನನ್ನನ್ನೆತ್ತಿ ಸಮುದ್ರದೊಳಗೆ ಬಿಸಾಡಿರಿ. ಆಗ ಸಮುದ್ರವು ಶಾಂತವಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ಅವರಿಗೆ, “ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ಶಾಂತವಾಗುವುದು. ಏಕೆಂದರೆ ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ, ನಿಮ್ಮ ಮೇಲೆ ಬಂತೆಂದು ಬಲ್ಲೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:12
10 ತಿಳಿವುಗಳ ಹೋಲಿಕೆ  

ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.


ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೇ; ಮಹಾಪಾಪ ಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಸರ್ವೇಶ್ವರಾ, ನನ್ನ ದೇವರೇ, ನಿಮ್ಮ ಕತ್ತಿ ನಿಮ್ಮ ಜನರನ್ನು ಬಾಧಿಸದೆ, ಅವರಿಗೆ ವಿರೋಧವಾಗಿ ಇರದೆ, ನನಗೂ ನನ್ನ ಮನೆಯವರಿಗೂ ವಿರೋಧ ಆಗಿರಲಿ,” ಎಂದು ಬೇಡಿಕೊಂಡನು.


ಆದುದರಿಂದಲೇ ಇಸ್ರಯೇಲರು ಶತ್ರುಗಳ ಮುಂದೆ ನಿಲ್ಲಲಾರದೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದುದನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


“ಇಡೀ ರಾಷ್ಟ್ರವೇ ನಿರ್ನಾಮವಾಗುವುದಕ್ಕಿಂತ ಜನತೆಗೋಸ್ಕರ ಒಬ್ಬನು ಸಾಯುವುದೇ ವಿಹಿತವೆಂದು ನಿಮಗೆ ಅರ್ಥವಾಗುತ್ತಿಲ್ಲವಲ್ಲಾ,” ಎಂದು ನುಡಿದನು.


ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಆದರೆ ಒಬ್ಬನೇ ಒಬ್ಬ ಪಾಪಿ ಸಾಕು ಪುಣ್ಯಕೋಟೆಯನ್ನು ಹಾಳುಮಾಡಲು!


ಆಗ ಬಿರುಗಾಳಿ ಮತ್ತಷ್ಟು ತೀವ್ರಗೊಳ್ಳುತ್ತಿತ್ತು. ನಾವಿಕರು ಯೋನನಿಗೆ: “ಸಮುದ್ರವು ಶಾಂತವಾಗಬೇಕಾದರೆ ನಿನ್ನನ್ನು ಏನು ಮಾಡಬೇಕು? ಹೇಳು,” ಎಂದು ಕೇಳಿದರು.


ನಾವಿಕರು ಅವನ ಸಲಹೆಗೆ ಒಪ್ಪದೆ, ಹಡಗನ್ನು ದಡಕ್ಕೆ ಸಾಗಿಸಲು ತಮ್ಮ ಶಕ್ತಿಸಾಮರ್ಥ್ಯವನ್ನೆಲ್ಲ ಪ್ರಯೋಗಿಸಿ ಹುಟ್ಟುಹಾಕಿದರು. ಆದರೆ ಸಾಧ್ಯವಾಗಲಿಲ್ಲ. ಸಮುದ್ರವು ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.


ನಿನ್ನ ನೀಚತನದಿಂದ ನಿನ್ನಂಥವನಿಗೇ ನಷ್ಟ ನಿನ್ನ ಸಜ್ಜನಿಕೆಯಿಂದ ನರಜನ್ಮದವನಿಗೇ ಲಾಭ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು