Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:13 - ಕನ್ನಡ ಸತ್ಯವೇದವು C.L. Bible (BSI)

13 ನಾವಿಕರು ಅವನ ಸಲಹೆಗೆ ಒಪ್ಪದೆ, ಹಡಗನ್ನು ದಡಕ್ಕೆ ಸಾಗಿಸಲು ತಮ್ಮ ಶಕ್ತಿಸಾಮರ್ಥ್ಯವನ್ನೆಲ್ಲ ಪ್ರಯೋಗಿಸಿ ಹುಟ್ಟುಹಾಕಿದರು. ಆದರೆ ಸಾಧ್ಯವಾಗಲಿಲ್ಲ. ಸಮುದ್ರವು ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವಿಕರು ಒಪ್ಪದೆ ದಡಕ್ಕೆ ಹಿಂದಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲಕಲ್ಲೋಲವಾಗಿ ಅವರನ್ನು ಎದುರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಅವರಿಗೆ ಯೋನನನ್ನು ಸಮುದ್ರಕ್ಕೆ ಬಿಸಾಡಲು ಮನಸ್ಸಿಲ್ಲದೆ ಹೋಯಿತು. ಅವರು ಹಡಗನ್ನು ದಡಕ್ಕೆ ನಡೆಸಿಕೊಂಡು ಹೋಗಲು ಪ್ರಯತ್ನಪಟ್ಟರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಬಿರುಗಾಳಿಯೂ ಸಮುದ್ರದ ತೆರೆಗಳೂ ಹೆಚ್ಚೆಚ್ಚಾಗಿ ಬಲವಾಗುತ್ತಾ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟುಹಾಕಿದರು. ಆದರೆ ಅವರಿಂದಾಗದೆ ಹೋಯಿತು. ಏಕೆಂದರೆ ಸಮುದ್ರವು ಅವರಿಗೆ ಎದುರಾಗಿ, ಹೆಚ್ಚೆಚ್ಚಾಗಿ ತೆರೆಗಳಿಂದ ರೋಷಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:13
4 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ಯೋನನು: “ನನ್ನನ್ನು ಎತ್ತಿ ಸಮುದ್ರಕ್ಕೆ ಎಸೆಯಿರಿ. ಆಗ ಅದು ಶಾಂತವಾಗುವುದು. ನೀವು ಇಂಥ ಭೀಕರ ಬಿರುಗಾಳಿಗೆ ತುತ್ತಾಗಲು ನಾನೇ ಕಾರಣ. ಇದನ್ನು ನಾನು ಚೆನ್ನಾಗಿ ಬಲ್ಲೆ,” ಎಂದನು.


ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು