Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರಲು ಅವರು ಯೆಹೋವನಿಗೆ ಮೊರೆಯಿಟ್ಟು - ಯೆಹೋವನೇ, ಲಾಲಿಸು, ಲಾಲಿಸು; ಈ ಮನುಷ್ಯನ ಪ್ರಾಣನಷ್ಟಕ್ಕಾಗಿ ನಾಶನವು ನಮಗೆ ಬಾರದಿರಲಿ; ನಿರಪರಾಧಿಯನ್ನು ಕೊಲ್ಲುವ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟಕಾರ್ಯ ಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುವೆ. ಆದ್ದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವರು ಯೆಹೋವ ದೇವರಿಗೆ ಕೂಗಿ, “ಯೆಹೋವ ದೇವರೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ. ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡಿರಿ. ಯೆಹೋವ ದೇವರೇ, ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:14
15 ತಿಳಿವುಗಳ ಹೋಲಿಕೆ  

ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II


ಮಾಡುವನು ಪ್ರಭು ತನಗಿಷ್ಟ ಬಂದುದನು I ಭೂಮ್ಯಾಕಾಶ, ಸಮುದ್ರ ಸಾಗರದೊಳು II


ಸರ್ವೇಶ್ವರಾ, ನೀವು ಬಿಡುಗಡೆ ಮಾಡಿದ ನಿಮ್ಮ ಜನರನ್ನು ಕ್ಷಮಿಸಬೇಕು; ಅನ್ಯಾಯ ಆದ ನರಹತ್ಯ ದೋಷಫಲವು ನಿಮ್ಮ ಜನರಾದ ಇಸ್ರಯೇಲರಿಗೆ ತಗಲದಿರಲಿ’ ಎಂದು ಹೇಳಬೇಕು.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II


ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಇದನ್ನು ಕಂಡು ಜನರು ಸರ್ವೇಶ್ವರಸ್ವಾಮಿಗೆ ಬಹುವಾಗಿ ಭಯಪಟ್ಟರು; ಯಜ್ಞವನ್ನು ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.


ಇಷ್ಟರೊಳಗೆ ಯೋನನು ಹಡಗಿನ ತಳಭಾಗಕ್ಕೆ ಇಳಿದುಹೋಗಿ ಹಾಯಾಗಿ ಮಲಗಿದ್ದನು. ಅವನಿಗೆ ಗಾಢನಿದ್ರೆ ಹತ್ತಿತ್ತು.


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ನಾವಿಕರು ಅವನ ಸಲಹೆಗೆ ಒಪ್ಪದೆ, ಹಡಗನ್ನು ದಡಕ್ಕೆ ಸಾಗಿಸಲು ತಮ್ಮ ಶಕ್ತಿಸಾಮರ್ಥ್ಯವನ್ನೆಲ್ಲ ಪ್ರಯೋಗಿಸಿ ಹುಟ್ಟುಹಾಕಿದರು. ಆದರೆ ಸಾಧ್ಯವಾಗಲಿಲ್ಲ. ಸಮುದ್ರವು ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.


ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು; ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು