Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:15 - ಕನ್ನಡ ಸತ್ಯವೇದವು C.L. Bible (BSI)

15 ಬಳಿಕ ಅವರು ಯೋನನನ್ನು ಎತ್ತಿ ಸಮುದ್ರಕ್ಕೆ ಎಸೆದರು. ತಕ್ಷಣವೇ, ಭೋರ್ಗರೆಯುತ್ತಿದ್ದ ಸಮುದ್ರ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆನಂತರ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ಭೋರ್ಗರೆಯುವುದನ್ನು ನಿಲ್ಲಿಸಿ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನೇ, ನಿನ್ನ ಚಿತ್ತಾನುಸಾರ ಮಾಡಿದಿಯಲ್ಲಾ ಎಂದು ಬಿನ್ನವಿಸಿ ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ತನ್ನ ರೌದ್ರವನ್ನು ನಿಲ್ಲಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಜನರು ಯೋನನನ್ನು ಸಮುದ್ರದೊಳಗೆ ಬಿಸಾಡಿಬಿಟ್ಟರು. ಆಗ ಬಿರುಗಾಳಿಯು ನಿಂತಿತು. ಸಮುದ್ರವು ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು. ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:15
10 ತಿಳಿವುಗಳ ಹೋಲಿಕೆ  

ಶಿಷ್ಯರು ಬಂದು ಯೇಸುವನ್ನು ಎಬ್ಬಿಸಿ, “ಸ್ವಾಮೀ, ಸ್ವಾಮೀ, ನಾವು ಸಾಯುತ್ತಿದ್ದೇವೆ,” ಎಂದರು. ಯೇಸು ಎಚ್ಚೆತ್ತು ಬಿರುಗಾಳಿಯನ್ನೂ ಭೋರ್ಗರೆಯುತ್ತಿದ್ದ ಅಲೆಗಳನ್ನೂ ಗದರಿಸಿದರು. ಅವು ಸ್ತಬ್ಧವಾದವು. ವಾತಾವರಣ ಶಾಂತವಾಯಿತು.


ಆ ಬಿರುಗಾಳಿಯನಾತ ಶಾಂತಪಡಿಸಿದ I ನಿಂತುಹೋಯಿತಾ ಸಮುದ್ರದಲೆಗಳ ಮೊರೆತ II


ಕಡಲ ಕಲ್ಲೋಲಗಳನ್ನೆಲ್ಲ ಅಂಕೆಯಲಿ ಇಡುವವನು ನೀನು I ತರಂಗವೇಳುವಾಗಲು ಕೂಡ ತಡೆಹಿಡಿವವನು ನೀನು II


ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


ಭೋರ್ಗರೆವ ಸಮುದ್ರಗಳನು, ಗರ್ಜಿಸುವ ತರಂಗಗಳನು I ದೊಂಬಿಯೇಳುವ ಜನಾಂಗಗಳನು ಶಮನಗೊಳಿಸುವವನು ನೀನು II


ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ನಾಡಿನ ಮೇಲೆ ದೇವರಿಗಿದ್ದ ಕೋಪ ಶಮನವಾಯಿತು.


ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು