Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:16 - ಕನ್ನಡ ಸತ್ಯವೇದವು C.L. Bible (BSI)

16 ಇದನ್ನು ಕಂಡು ಜನರು ಸರ್ವೇಶ್ವರಸ್ವಾಮಿಗೆ ಬಹುವಾಗಿ ಭಯಪಟ್ಟರು; ಯಜ್ಞವನ್ನು ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳ ಭಯಪಟ್ಟು ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನರು ಇದನ್ನು ನೋಡಿದಾಗ ಅವರು ಯೆಹೋವನಿಗೆ ಭಯಪಟ್ಟು ಗೌರವಿಸಿದರು. ಅವರು ಆತನಿಗೆ ಯಜ್ಞವನ್ನರ್ಪಿಸಿ ಹರಕೆ ಹಾಕಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಆ ಜನರು, ಯೆಹೋವ ದೇವರಿಗೆ ಬಹಳವಾಗಿ ಭಯಪಟ್ಟು, ಅವರಿಗೆ ಬಲಿ ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:16
19 ತಿಳಿವುಗಳ ಹೋಲಿಕೆ  

ಸಮರ್ಪಿಸಲಿ ಆತನಿಗೆ ಕೃತಜ್ಞತಾ ಬಲಿಗಳನು I ಹಾಡಿಹೊಗಳಲಿ ಆತನಾ ಮಹತ್ಕಾರ್ಯಗಳನು II


ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.


ಇಡೀ ಧರ್ಮಸಭೆಯೂ ಇದನ್ನು ಕೇಳಿದ ಎಲ್ಲರೂ ಭಯಭ್ರಾಂತರಾದರು.


ಭೂಮಿಯಲ್ಲಿರುವ ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆಕಾಳಿಗೂ ಅದನ್ನು ಹೋಲಿಸಬಹುದು.


ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. “ಎಂಥಾ ತಪ್ಪುಮಾಡಿದೆ!” ಎಂದು ಅವನನ್ನು ಖಂಡಿಸಿದರು.


ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!


ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ದೇವರಿಗೆ ನೀನು ಹರಕೆಯನ್ನು ಹೊತ್ತರೆ ತೀರಿಸಲು ತಡಮಾಡಬೇಡ. ದೇವರು ಮೂಢರಿಗೆ ಒಲಿಯುವುದಿಲ್ಲ. ನಿನ್ನ ಹರಕೆಯನ್ನು ತಪ್ಪದೆ ತೀರಿಸು.


ಆತನಿಗೆ ನಾ ಹೊತ್ತ ಹರಕೆಗಳನು I ಆತನ ಸಭೆಮುಂದೆಯೆ ತೀರಿಸುವೆನು II


ಆಗ ಅವನು ಎಲೀಷನಿಗೆ, “ತಾವು ಏನನ್ನೂ ಸ್ವೀಕರಿಸದಿದ್ದರೆ ತಮ್ಮ ಸೇವಕನಾದ ನನಗೆ ಎರಡು ಹೇಸರಕತ್ತೆಗಳು ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಸರ್ವೇಶ್ವರಸ್ವಾಮಿ ಒಬ್ಬರಿಗೇ ದಹನಬಲಿಗಳನ್ನು ಸಮರ್ಪಿಸಬೇಕೆಂದಿರುತ್ತೇನೆ.


“ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಬಲಿದಾನ ಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಸರ್ವೇಶ್ವರನಿಗೆ ಸಮರ್ಪಿಸು,” ಎಂದನು. ಅವನು ಸರ್ವೇಶ್ವರನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.


ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು,


ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.


ಎಂತಲೇ ಜನರಿಗೆ ಆತನಲ್ಲಿದೆ ಭಯಭಕ್ತಿ ತಾವೇ ಜ್ಞಾನಿಗಳೆಂದುಕೊಳ್ಳುವವರಲಿ ದೇವರಿಗಿಲ್ಲ ಲಕ್ಷ್ಯ.”


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು