ಯೋನನು 1:17 - ಕನ್ನಡ ಸತ್ಯವೇದವು C.L. Bible (BSI)17 ಇತ್ತ ಸರ್ವೇಶ್ವರಸ್ವಾಮಿಯ ಆಜ್ಞಾನುಸಾರ ದೊಡ್ಡ ಮೀನೊಂದು ಬಂದು ಯೋನನನ್ನು ನುಂಗಿತು. ಅವನು ಅದರ ಹೊಟ್ಟೆಯಲ್ಲಿ ಮೂರು ಹಗಲು, ಮೂರು ಇರುಳು ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇತ್ತ ಯೋನನನ್ನು ನುಂಗಲು ಯೆಹೋವನು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೋನನು ಸಮುದ್ರದೊಳಗೆ ಬಿದ್ದಾಗ, ಅವನನ್ನು ನುಂಗಿಬಿಡಲು ಯೆಹೋವನು ಒಂದು ದೊಡ್ಡ ಮೀನಿಗೆ ಆಜ್ಞಾಪಿಸಿದನು. ಯೋನನು ಆ ಮೀನಿನ ಹೊಟ್ಟೆಯೊಳಗೆ ಮೂರು ಹಗಲು ಮೂರು ರಾತ್ರಿ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು. ಅಧ್ಯಾಯವನ್ನು ನೋಡಿ |