ಯೋನನು 1:2 - ಕನ್ನಡ ಸತ್ಯವೇದವು C.L. Bible (BSI)2 “ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಗಟ್ಟಿಯಾಗಿ ಕೂಗುತ್ತಾ ಅದನ್ನು ಖಂಡಿಸು; ಅದರ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಕೃತ್ಯಗಳನ್ನು ನೋಡಿದ್ದೇನೆ. ಆದ್ದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು. ಅಧ್ಯಾಯವನ್ನು ನೋಡಿ |