Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:4 - ಕನ್ನಡ ಸತ್ಯವೇದವು C.L. Bible (BSI)

4 ಆದರೆ ಸರ್ವೇಶ್ವರ ಸಮುದ್ರದಲ್ಲಿ ಬಿರುಗಾಳಿಯೊಂದನ್ನು ಬರಮಾಡಿದರು. ಅಲೆಗಳ ಹೊಡೆತಕ್ಕೆ ಹಡಗು ನುಚ್ಚುನೂರಾಗಿ ಒಡೆದುಹೋಗುವುದರಲ್ಲಿತ್ತು. ದಿಗ್ಭ್ರಾಂತರಾದ ನಾವಿಕರು ಪ್ರಾಣರಕ್ಷಣೆಗಾಗಿ ತಮ್ಮ ದೇವದೇವತೆಗಳ ಮೊರೆ ಹೊಕ್ಕರು. ಪ್ರಾಣಾಪಾಯದಿಂದ ಪಾರಾಗಲು ತಮ್ಮಲ್ಲಿದ್ದ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬಳಿಕ ಯೆಹೋವನು ಬಿರುಗಾಳಿಯನ್ನು ಸಮುದ್ರದ ಮೇಲೆ ಬಲವಾಗಿ ಬೀಸಲು ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಯೆಹೋವನು ಸಮುದ್ರದ ಮೇಲೆ ದೊಡ್ಡ ಬಿರುಗಾಳಿ ಬೀಸುವಂತೆ ಮಾಡಿದನು. ಬಿರುಗಾಳಿಯು ಸಮುದ್ರದಲ್ಲಿ ದೊಡ್ಡ ಅಲೆಗಳನ್ನು ಎಬ್ಬಿಸಿತು. ಬಿರುಗಾಳಿಯು ಬಲವಾಗಿದ್ದುದರಿಂದ ಹಡಗು ಒಡೆದುಹೋಗುವುದರಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಯೆಹೋವ ದೇವರು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದರು. ಸಮುದ್ರದಲ್ಲಿ ಮಹಾ ಬಿರುಗಾಳಿ ಉಂಟಾಗಿ, ಹಡಗು ಒಡೆಯುವುದರಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:4
13 ತಿಳಿವುಗಳ ಹೋಲಿಕೆ  

ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II


ಸರ್ವೇಶ್ವರ ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದರು. ಅದು ಆ ಮಿಡಿತೆಗಳನ್ನು ಬಡಿದುಕೊಂಡು ಹೋಗಿ ಕೆಂಪು ಸಮುದ್ರದೊಳಗೆ ಹಾಕಿಬಿಟ್ಟಿತು. ಈಜಿಪ್ಟ್ ದೇಶದ ಮೇರೆಗಳೊಳಗೆ ಒಂದು ಮಿಡಿತೆಯನ್ನೂ ನಿಲ್ಲಲು ಬಿಡಲಿಲ್ಲ.


ಸರ್ವೇಶ್ವರನಿಂದ ಕಳಿಸಲಾದ ಗಾಳಿಯೊಂದು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಬಂದಿತು. ಆ ಹಕ್ಕಿಗಳು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬಂದವು.


ಆದರೆ ನಿನ್ನದೊಂದು ಉಸಿರುಗಾಳಿ ಸಾಕಾಯಿತು ಅವರು ಸೀಸದ ಗುಂಡಿನಂತೆ ಮುಳುಗಿ ಹೋಗಲು. ಅವರನ್ನು ಸಮುದ್ರವು ನುಂಗಿಬಿಡಲು


ಮೋಶೆ ಸಮುದ್ರದ ಮೇಲೆ ಕೈ ಚಾಚಿದಾಗ ಸರ್ವೇಶ್ವರ ಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು.


ಅಂತೆಯೇ ಮೋಶೆ ತನ್ನ ಕೋಲನ್ನು ಈಜಿಪ್ಟ್ ದೇಶದ ಮೇಲೆ ಚಾಚಿದನು. ಸರ್ವೇಶ್ವರ ಹಗಲಿರುಳು ಪೂರ್ವದಿಕ್ಕಿನಿಂದ ಗಾಳಿ ಬೀಸುವಂತೆ ಮಾಡಿದರು. ಆ ಗಾಳಿಯಿಂದಾಗಿ ಮುಂಜಾನೆಯಲ್ಲೇ ಮಿಡತೆಗಳು ಬಂದಿದ್ದವು.


ಮಾಡುವನು ಪ್ರಭು ತನಗಿಷ್ಟ ಬಂದುದನು I ಭೂಮ್ಯಾಕಾಶ, ಸಮುದ್ರ ಸಾಗರದೊಳು II


ಆತನ ಘರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ ಭುವಿಯ ಕಟ್ಟಕಡೆಯಿಂದ ಮೋಡ ಮೇಲೇರುತ್ತದೆ ಮಳೆಗೋಸ್ಕರ ಮಿಂಚು ಹೊಳೆಯುತ್ತದೆ ಆತನ ಭಂಡಾರದಿಂದ ಗಾಳಿ ಬೀಸುತ್ತದೆ.


ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು