Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 2:2 - ಕನ್ನಡ ಸತ್ಯವೇದವು C.L. Bible (BSI)

2 “ಸಂಕಟದಲಿ, ಸರ್ವೇಶ್ವರಾ, ನಾ ನಿನಗೆ ಮೊರೆಯಿಟ್ಟೆ ನೀನೆನ್ನ ಮೊರೆಗೆ ಕಿವಿಗೊಟ್ಟೆ. ಪಾತಾಳದಂತರಾಳದಿಂದ ನಿನ್ನ ನೆರವನ್ನು ಬೇಡಿದೆ ನೀನೆನ್ನ ಪ್ರಾರ್ಥನೆಯನ್ನಾಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಕ್ಕಟ್ಟಿನಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಕೂಗಿಕೊಂಡೆನು, ಆಹಾ, ನನ್ನ ಧ್ವನಿಯನ್ನು ಲಾಲಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾನು ದೊಡ್ಡ ಆಪತ್ತಿನಲ್ಲಿದ್ದೆನು. ಸಹಾಯಕ್ಕಾಗಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಉತ್ತರ ದಯಪಾಲಿಸಿದನು. ನಾನು ಆಳವಾದ ಸಮಾಧಿಯೊಳಗಿದ್ದೆನು. ನಾನು ನಿನಗೆ ಮೊರೆಯಿಟ್ಟಾಗ, ಯೆಹೋವನೇ, ನೀನು ನನ್ನ ಸ್ವರವನ್ನು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಹೀಗೆ ಹೇಳಿದನು: “ನಾನು ನನ್ನ ವ್ಯಥೆಯಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟೆನು. ಅವರು ನನ್ನ ಕೂಗನ್ನು ಕೇಳಿದರು. ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ನಾನು ಕೂಗಿದೆನು, ಆಗ ನನ್ನ ಕರೆಯನ್ನು ನೀವು ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 2:2
26 ತಿಳಿವುಗಳ ಹೋಲಿಕೆ  

ಸಂಕಟದಲಿ ಮೊರೆಯಿಟ್ಟೆನು ಪ್ರಭುವಿಗೆ I ಕೊಟ್ಟನು ಸದುತ್ತರವನು ಆತನೆನಗೆ II


ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II


ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.


ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II


ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II


ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ನಿನ್ನ ಸ್ವಾಗತಿಸಲು ಸಡಗರದಿಂದಿದೆ ಪಾತಾಳಲೋಕವು, ಚೇತನಗೊಂಡಿವೆ ಲೋಕಮುಖಂಡರ ಪ್ರೇತಗಳು, ಎದ್ದು ನಿಂತಿಹರು ಸಕಲ ರಾಷ್ಟ್ರಗಳ ಅರಸರುಗಳು.


ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II


ಎದೆಗುಂದಿ ಮೊರೆಯಿಡುತ್ತಿರುವೆ ಜಗದೆಲ್ಲೆಯಿಂದ I ಹತ್ತಲಾಗದ ಆಶ್ರಯಗಿರಿಗೆ ಹತ್ತಿಸೆನ್ನ II


ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


ಏಕೆನೆ, ದೂಡಲಾರೆ ಪಾತಾಳಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು.


ನಿಮ್ಮ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡಿ. ಈವರೆಗೂ ನನ್ನ ಅತಿಯಾದ ಚಿಂತೆಯನ್ನೂ ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆ,” ಎಂದು ಹೇಳಿದಳು.


“ಹೇ ಸರ್ವೇಶ್ವರಾ, ಆಳವಾದ ಗುಳಿಯಲ್ಲಿ ನಾ ಕುಳಿತೆ ನಿನ್ನ ಹೆಸರೆತ್ತಿ ನಾನು ಪ್ರಾರ್ಥನೆಮಾಡಿದೆ.


ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.


ನೀರಾವರಿಯ ಯಾವ ಮರವು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತನ್ನ ತುದಿಯಿಂದ ಮೋಡ ಮುಟ್ಟದಿರಲೆಂದು ಹಾಗೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಿಗುರಿಕೊಳ್ಳದಿರಲೆಂದು ಹೀಗಾಯಿತು; ಆದರೆ ಎಲ್ಲ ಮರಗಳು ಮರಣದ ಪಾಲಾಗುವುವು. ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ, ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವುವು.”


ಆದರೆ ಆ ಕಷ್ಟದಲ್ಲಿ ಮನಸ್ಸೆ ತನ್ನ ದೇವರಾದ ಸರ್ವೇಶ್ವರನ ಪ್ರಸನ್ನತೆಯನ್ನು ಬೇಡಿಕೊಂಡನು; ತನ್ನ ಪಿತೃಗಳ ದೇವರ ಮುಂದೆ ತನ್ನನ್ನೇ ಬಹಳವಾಗಿ ತಗ್ಗಿಸಿಕೊಂಡು ಅವರನ್ನು ಪ್ರಾರ್ಥಿಸಿದನು.


ಏಕೆಂದರೆ, ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು