ಯೋನನು 2:4 - ಕನ್ನಡ ಸತ್ಯವೇದವು C.L. Bible (BSI)4 ನಿನ್ನ ಸನ್ನಿಧಿಯಿಂದ ನಾನಿನ್ನು ಬಹಿಷ್ಕೃತ ಕಾಣೆನೆಂದೂ ನಿನ್ನ ಪವಿತ್ರಾಲಯ ನಿರುತ. ಈ ಭಾಗ್ಯಗಳೆಲ್ಲ ಎನಗಿಲ್ಲವೆಂದು ಪರಿಪರಿಯಾಗಿ ಮರುಗುತಿರುವೆನಿಂದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನ ಸಾನ್ನಿಧ್ಯದಿಂದ ಬಿಸಾಡಲ್ಪಟ್ಟಿದ್ದೇನೆ ಅಂದುಕೊಂಡೆನು; ಆದರೂ ನಿನ್ನ ಪರಿಶುದ್ಧಾಲಯವನ್ನು ಪುನಃ ದರ್ಶನಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ನಾನು, ‘ನಾನು ನಿನ್ನ ಕಣ್ಣೆದುರಿನಿಂದ ಹೊರದೂಡಲ್ಪಟ್ಟಿದ್ದೇನೆ’ ಅಂದುಕೊಂಡೆನು. ಆದರೂ ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ನೋಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ನಾನು ಹೇಳಿದ್ದು, ‘ನಿಮ್ಮ ಕಣ್ಣುಗಳ ಎದುರಿನಿಂದ ಬಹಿಷ್ಕೃತನಾಗಿದ್ದೇನೆ. ಆದರೂ ನಾನು ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಪುನಃ ನೋಡುವೆನು.’ ಅಧ್ಯಾಯವನ್ನು ನೋಡಿ |