Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 2:8 - ಕನ್ನಡ ಸತ್ಯವೇದವು C.L. Bible (BSI)

8 ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸುಳ್ಳು ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ಕರುಣಾನಿಧಿಯನ್ನು ತೊರೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ. ಆದರೆ ಆ ವಿಗ್ರಹಗಳು ಅವರಿಗೆ ಸಹಾಯ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 2:8
11 ತಿಳಿವುಗಳ ಹೋಲಿಕೆ  

ಇಲ್ಲಸಲ್ಲದ ದೇವರನು ಅವಲಂಬಿಪರನು ನೀ ಒಲ್ಲೆ I ನಾನಾದರೋ ಪ್ರಭು, ಭರವಸೆಯಿಟ್ಟಿರುವುದು ನಿನ್ನಲ್ಲೆ II


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿ; ಅವುಗಳಿಂದ ನಿಮಗೆ ಲಾಭವಿಲ್ಲ; ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ ಸರಿ.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಕಳ್ಳುಸುಬಿನಲಿ ನಾನಿಳಿದು ಹೋಗದಂತೆ ಸೆಳೆದುಕೊ I ಪೊಳ್ಳು ದುರುಳರ ಮಡುವಿನಲಿ ನಾ ಮುಳುಗದಂತೆ ಎಳೆದುಕೊ II


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು