Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:3 - ಕನ್ನಡ ಸತ್ಯವೇದವು C.L. Bible (BSI)

3 ಸ್ವಾಮಿಯ ಆಜ್ಞಾನುಸಾರ ಯೋನನು ನಿನೆವೆಗೆ ಹೋದನು. ಅದೊಂದು ವಿಸ್ತಾರವಾದ ನಗರ. ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾ ಪಟ್ಟಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋನನು ಯೆಹೋವನ ಆಜ್ಞೆಗೆ ವಿಧೇಯನಾಗಿ ನಿನೆವೆಗೆ ಬಂದನು. ನಿನೆವೆಯು ಬಹು ವಿಶಾಲವಾದ ಪಟ್ಟಣ. ಅದು ಮೂರು ದಿನಗಳ ಪ್ರಯಾಣದಷ್ಟು ದೊಡ್ಡದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:3
9 ತಿಳಿವುಗಳ ಹೋಲಿಕೆ  

ಬೆಟ್ಟಗುಡ್ಡಗಳನಿದೋ ಕವಿದಿದೆ ಅದರ ಕುಡಿಗಳು I ದೇವದಾರು ಮರಗಳ ಮೇಲೆ ಹಬ್ಬಿವೆ ಬಳ್ಳಿಗಳು II


ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II


ಆಗ ರಾಖೇಲಳು, “ನನ್ನ ಅಕ್ಕನ ಸಂಗಡ ಬಹಳವಾಗಿ ಹೋರಾಡಿ ಗೆದ್ದಿದ್ದೇನೆ,” ಎಂದು ಹೇಳಿ ಆ ಮಗುವನ್ನು ‘ನಫ್ತಾಲಿ’ ಎಂದು ಹೆಸರಿಸಿದಳು.


ಲೂಕನು ಮಾತ್ರ ನನ್ನ ಜೊತೆಯಿದ್ದಾನೆ, ನೀನು ಬರುವಾಗ ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನ ಸೇವೆ ನನಗೆ ಅಗತ್ಯವಾಗಿದೆ.


ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು.


“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”


ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು