Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:6 - ಕನ್ನಡ ಸತ್ಯವೇದವು C.L. Bible (BSI)

6 ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೋನನ ಪ್ರಕಟನೆಯು ನಿನೆವೆಯ ಅರಸನಿಗೆ ಮುಟ್ಟಲು ಅವನು ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿನೆವೆಯ ಅರಸನು ಇದನ್ನು ಕೇಳಿ ತಾನು ಮಾಡಿದ ದುಷ್ಕೃತ್ಯಗಳಿಗಾಗಿ ಮನಮರುಗಿದನು. ತಾನು ಸಿಂಹಾಸನದಿಂದಿಳಿದು ರಾಜವಸ್ತ್ರವನ್ನು ತೆಗೆದಿಟ್ಟು ಶೋಕವಸ್ತ್ರವನ್ನು ಧರಿಸಿ ಬೂದಿಯ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:6
20 ತಿಳಿವುಗಳ ಹೋಲಿಕೆ  

ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.


ಯೋಬನು ತನ್ನ ಮೈಕಡಿತವನ್ನು ತಾಳಲಾಗದೆ ಬೋಕಿಯೊಂದರಿಂದ ಕೆರೆದುಕೊಳ್ಳುತ್ತಾ ಬೂದಿಗುಂಡಿಯಲ್ಲಿ ಕುಳಿತುಕೊಳ್ಳಬೇಕಾಯಿತು.


“ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು.


:ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು.


ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”


ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.


ಈ ವಿಷಯವನ್ನು ಗಾತ್ ಊರಿನವರಿಗೆ ತಿಳಿಸಬೇಡಿ; ಅಳಲೂಬೇಡಿ. ಬೇತ್ಲೆಯಪ್ರದಲ್ಲಿ, ಧೂಳಿನಲ್ಲಿ ಬಿದ್ದು ಹೊರಳಾಡಿ.


ಮಣ್ಣು ಮುಕ್ಕಬೇಕಾಗಿ ಬಂದರೂ


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


ಗೋಣಿತಟ್ಟನುಟ್ಟು ತಿರುಗುತಿಹರು ಹಾದಿಬೀದಿಗಳಲಿ, ಕಣ್ಣೀರಿಡುತ ಸೊರಗಿಹರು ಮಳಿಗೆಗಳಲಿ, ಬೀದಿ ಚೌಕಗಳಲಿ.


ಅರಸನೇ ಆಗಲಿ, ಅವನ ಸೇವಕರಲ್ಲಿ ಯಾರೇ ಆಗಲಿ, ಸುರುಳಿಯ ಮಾತುಗಳನ್ನೆಲ್ಲಾ ಕೇಳಿಯೂ ಭಯಪಡಲಿಲ್ಲ. ದುಃಖಸೂಚನೆಗಾಗಿ ತಮ್ಮ ಬಟ್ಟೆಯನ್ನು ಹರಿದುಕೊಳ್ಳಲಿಲ್ಲ.


ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.


ಆಗ ಸಮುದ್ರದ ಸುತ್ತುಮುತ್ತಲಿನ ಎಲ್ಲ ಒಡೆಯರು ತಮ್ಮ ಸಿಂಹಾಸನಗಳಿಂದಿಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ಕಸೂತಿ ವಸ್ತ್ರಗಳನ್ನು ಕಿತ್ತೆಸೆದು, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಕ್ಕರಿಸಿ, ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿಬೆರಗಾಗುವರು.


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.


ಮಿಕಾಯನು ತನ್ನ ಹಾಗೂ ಜನರ ಮುಂದೆ ಗ್ರಂಥ ಸುರುಳಿಯಿಂದ ಬಾರೂಕನು ಓದಿ ಹೇಳಿದ್ದ ಎಲ್ಲ ಮಾತುಗಳನ್ನು ಅವರಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು