Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:8 - ಕನ್ನಡ ಸತ್ಯವೇದವು C.L. Bible (BSI)

8 ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು; ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರು ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗವನ್ನೂ ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರತಿ ಮನುಷ್ಯನೂ ಪ್ರಾಣಿಯೂ ಶೋಕವಸ್ತ್ರವನ್ನು ಧರಿಸಬೇಕು. ಜನರು ದೇವರಿಗೆ ಗಟ್ಟಿಯಾಗಿ ಮೊರೆಯಿಡಬೇಕು. ಪ್ರತಿಯೊಬ್ಬನು ತನ್ನ ದುಷ್ಟಜೀವಿತವನ್ನು ಬದಲಾಯಿಸಿ ದುಷ್ಟತನ ಮಾಡುವದನ್ನು ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:8
23 ತಿಳಿವುಗಳ ಹೋಲಿಕೆ  

ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.


ನಿಮ್ಮ ಆ ಬಲೆಯು ನೂಲು ಬಟ್ಟೆಯಾಗದು. ನೀವು ನೇಯ್ದದ್ದು ಹೊದಿಕೆಯಾಗದು. ನಿಮ್ಮ ಕಾರ್ಯಗಳು ಅಕ್ರಮವಾದುವು. ನಿಮ್ಮ ಕೈಕೆಲಸಗಳು ಹಿಂಸಾತ್ಮಕವಾದುವು.


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


“ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.


ಶಿಕ್ಷಣ ಕೇಳುವಂತೆ ಅವರ ಕಿವಿಯನ್ನು ತೆರೆಯುವನು ಅಧರ್ಮವನ್ನು ಬಿಟ್ಟುಬಿಡುವಂತೆ ಆಜ್ಞಾಪಿಸುವನು.


ಅವರು ತಂದ ಸಮಾಚಾರ ಇದು: ‘ನೀವೆಲ್ಲರು ನಿಮ್ಮನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಬೇಕು. ಆಗ, ಸರ್ವೇಶ್ವರ ನಿಮಗೂ ನಿಮ್ಮ ಪೂರ್ವಜರಿಗೂ ಶಾಶ್ವತ ಸೊತ್ತಾಗಿ ಅನುಗ್ರಹಿಸಿದ ನಾಡಿನಲ್ಲಿ ನೀವು ನೆಲೆಗೊಳ್ಳುವಿರಿ.


ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು.


ಬಹುಶಃ, ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನಾದರು ಕೇಳಿ ತಮ್ಮ ದುರ್ಮಾರ್ಗಗಳನ್ನು ಬಿಟ್ಟು ಹಿಂದಿರುಗಬಹುದು. ಹಿಂದಿರುಗಿದರೆ, ಅವರ ಪಾಪಾಪರಾಧಗಳನ್ನು ಕ್ಷಮಿಸಿಬಿಡುವೆನು.”


ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು