ಯೋನನು 3:9 - ಕನ್ನಡ ಸತ್ಯವೇದವು C.L. Bible (BSI)9 ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಒಂದುವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?” ಅಧ್ಯಾಯವನ್ನು ನೋಡಿ |
ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.