ಯೋನನು 4:2 - ಕನ್ನಡ ಸತ್ಯವೇದವು C.L. Bible (BSI)2 ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು. ಅಧ್ಯಾಯವನ್ನು ನೋಡಿ |
ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.