Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:4 - ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಸರ್ವೇಶ್ವರ, “ನೀನು ಹೀಗೆ ಸಿಟ್ಟುಗೊಳ್ಳುವುದು ಸರಿಯೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಕ್ಕೆ ಯೆಹೋವನು, “ನೀನು ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದಕ್ಕೆ ಯೆಹೋವನು - ನೀನು ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಹೋವನು ಅವನಿಗೆ, “ನಾನು ಆ ಜನರನ್ನು ನಾಶಮಾಡದೆ ಹೋದುದರಿಂದ ನೀನು ಸಿಟ್ಟುಗೊಳ್ಳುವದು ಸರಿಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಯೆಹೋವ ದೇವರು, “ನೀನು ಹೀಗೆ ಕೋಪ ಮಾಡಿಕೊಳ್ಳುವುದು ಸರಿಯೋ?” ಎಂದು ಯೋನನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:4
13 ತಿಳಿವುಗಳ ಹೋಲಿಕೆ  

ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು.


“ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು.


ಆಗ ಸರ್ವೇಶ್ವರ ಕಾಯಿನನಿಗೆ, “ಕೋಪವೇಕೆ? ಮುಖ ಸಿಂಡರಿಸಿದೆ ಏಕೆ?


ಸಿರಿಸಂಪತ್ತು ನಿನ್ನನು ಕುಚೋದ್ಯಕ್ಕೆ ನೂಕೀತು, ಎಚ್ಚರಿಕೆ! ಹೆಚ್ಚು ಲಂಚಕೋರತನದಿಂದ ವಂಚಿತನಾಗಬೇಡ.


ಸರ್ವೇಶ್ವರಸ್ವಾಮಿಯ ವರ್ತನೆಯು ಯೋನನಿಗೆ ಹಿಡಿಸಲಿಲ್ಲ. ಅವನ ಕೋಪ ನೆತ್ತಿಗೇರಿತು.


“ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಮೊರೆಯಿಟ್ಟನು.


ಆಗ ಯೋನನು ನಗರವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋದನು. ಅಲ್ಲಿ ತನಗಾಗಿ ಒಂದು ಗುಡಿಸಲನ್ನು ಕಟ್ಟಿಕೊಂಡನು. ನಗರಕ್ಕೆ ಏನು ಸಂಭವಿಸುತ್ತದೋ ಎಂಬುದನ್ನು ನೋಡಲು ಅದರ ನೆರಳಿನಲ್ಲಿ ಕುಳಿತನು.


ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು