ಯೋನನು 4:5 - ಕನ್ನಡ ಸತ್ಯವೇದವು C.L. Bible (BSI)5 ಆಗ ಯೋನನು ನಗರವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋದನು. ಅಲ್ಲಿ ತನಗಾಗಿ ಒಂದು ಗುಡಿಸಲನ್ನು ಕಟ್ಟಿಕೊಂಡನು. ನಗರಕ್ಕೆ ಏನು ಸಂಭವಿಸುತ್ತದೋ ಎಂಬುದನ್ನು ನೋಡಲು ಅದರ ನೆರಳಿನಲ್ಲಿ ಕುಳಿತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣದಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವುದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕುಳಿತುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಲಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕೂತುಕೊಂಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇವೆಲ್ಲಾ ಯೋನನನ್ನು ಇನ್ನೂ ಸಿಟ್ಟುಗೊಳಿಸಿದ್ದವು. ಅವನು ನಗರದ ಹೊರಗೆ ಪೂರ್ವದ ಕಡೆಗೆ ಹೋಗಿ ತನಗೊಂದು ಮಂಟಪವನ್ನು ಕಟ್ಟಿ ಅದರ ನೆರಳಿನಲ್ಲಿ ಕುಳಿತುಕೊಂಡು ನಗರಕ್ಕೆ ಏನಾಗುವದು ಎಂಬದನ್ನು ಕಾಯುತ್ತಾ ಕುಳಿತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಯೋನನು ಪಟ್ಟಣವನ್ನು ಬಿಟ್ಟು, ಪಟ್ಟಣದ ಪೂರ್ವದಿಕ್ಕಿನ ಕಡೆಯಲ್ಲಿ ಕುಳಿತುಕೊಂಡು, ಗುಡಿಸಲನ್ನು ಕಟ್ಟಿಕೊಂಡು, ಪಟ್ಟಣದಲ್ಲಿ ಏನಾಗುವುದೆಂದು ನೋಡುವವರೆಗೆ ಗುಡಿಸಲಿನ ನೆರಳಿನಲ್ಲಿ ಕುಳಿತುಕೊಂಡನು. ಅಧ್ಯಾಯವನ್ನು ನೋಡಿ |