Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:7 - ಕನ್ನಡ ಸತ್ಯವೇದವು C.L. Bible (BSI)

7 ಆದರೆ ಮಾರನೆಯ ದಿನ ಮುಂಜಾನೆ ದೇವರ ಆಜ್ಞಾನುಸಾರ ಆ ಗಿಡಕ್ಕೆ ಹುಳುವೊಂದು ಹೊಡೆಯಿತು. ಆಗ ಗಿಡವು ಒಣಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮಾರನೆಯ ದಿನ ಮುಂಜಾನೆ ದೇವರು ಒಂದು ಹುಳಕ್ಕೆ ಆ ಸೋರೆಗಿಡವನ್ನು ಕೊರೆಯಲು ಅಪ್ಪಣೆ ಮಾಡಿದನು. ಆ ಗಿಡವು ಒಣಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮಾರಣೆಯ ಅರುಣೋದಯದಲ್ಲಿ ದೇವರು ಒಂದು ಹುಳಕ್ಕೆ ಅಪ್ಪಣೆಮಾಡಿದನು; ಅದು ಸೋರೆಗಿಡವನ್ನು ಹೊಡೆಯಲು ಒಣಗಿ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮರುದಿನ ಮುಂಜಾನೆ, ದೇವರು ಆ ಗಿಡವನ್ನು ತಿನ್ನಲು ಒಂದು ಹುಳವನ್ನು ಕಳುಹಿಸಿದನು. ಆ ಹುಳವು ಗಿಡವನ್ನು ತಿಂದ ನಿಮಿತ್ತ ಅದು ಬಾಡಿಹೋಗಿ ಸತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮಾರನೆಯ ದಿವಸ ಉದಯವಾದಾಗ, ದೇವರು ಒಂದು ಹುಳುವನ್ನು ಸಿದ್ಧಮಾಡಿದರು. ಅದು ಸೋರೆ ಬಳ್ಳಿಯನ್ನು ಒಣಗುವ ಹಾಗೆ ಹೊಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:7
7 ತಿಳಿವುಗಳ ಹೋಲಿಕೆ  

ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.


ನಿನ್ನ ಕೋಪತಾಪಗಳೆ ಕಾರಣ ಇದಕ್ಕೆಲ್ಲಾ I ನನ್ನನು ಮೇಲಕ್ಕೆತ್ತಿ ಬಿಸಾಡಿಬಿಟ್ಟಿರುವೆಯಲ್ಲಾ II


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


ದೇವರಾದ ಸರ್ವೇಶ್ವರ ಆ ಸ್ಥಳದಲ್ಲಿ ಒಂದು ಸೋರೆಬಳ್ಳಿ ಮೊಳೆಯುವಂತೆ ಮಾಡಿದರು. ಅದು ಬೆಳೆದು ತಲೆಗೆ ನೆರಳನ್ನೂ ಮನಸ್ಸಿಗೆ ತಣಿವನ್ನೂ ನೀಡಿತು. ಯೋನನಿಗೆ ಬಹಳ ಸಂತೋಷವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು