ಯೋನನು 4:8 - ಕನ್ನಡ ಸತ್ಯವೇದವು C.L. Bible (BSI)8 ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸೂರ್ಯನು ಆಕಾಶದಲ್ಲಿ ಏರಿ ಬಂದಾಗ ದೇವರು ಪೂರ್ವದ ಬಿಸಿಗಾಳಿ ಬೀಸುವಂತೆ ಮಾಡಿದನು. ಬಿಸಿಲಿನ ತಾಪವು ಯೋನನ ತಲೆಯ ಮೇಲೆ ಹೆಚ್ಚಾಯಿತು. ಯೋನನಿಗೆ ಶಾಖ ತಡೆಯಲಾಗಲಿಲ್ಲ. ಬಹಳ ಬಲಹೀನನಾದನು. ನನ್ನನ್ನು ಸಾಯಿಸು ಎಂದು ಯೋನನು ದೇವರನ್ನು ಬೇಡುತ್ತಾ, “ದೇವರೇ, ನಾನು ಬದುಕುವದಕ್ಕಿಂತ ಸಾಯುವುದೇ ಲೇಸು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು. ಅಧ್ಯಾಯವನ್ನು ನೋಡಿ |