Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:15 - ಕನ್ನಡ ಸತ್ಯವೇದವು C.L. Bible (BSI)

15 ಅಷ್ಟರಲ್ಲಿ, ಶೆಬದವರು ಬಂದು, ಮೇಲೆ ಬಿದ್ದು, ಅವುಗಳನ್ನು ಹೊಡೆದುಕೊಂಡು ಹೋದರು. ಕೂಲಿ ಆಳುಗಳನ್ನು ಕತ್ತಿಯಿಂದ ಕೊಂದುಹಾಕಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ಈ ಸುದ್ದಿಯನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಶೆಬ ದೇಶದವರು ನಮ್ಮ ಮೇಲೆ ಆಕ್ರಮಣ ಮಾಡಿ ನಿನ್ನ ಪಶುಗಳನ್ನೆಲ್ಲಾ ಹೊಡೆದುಕೊಂಡು ಹೋದರು; ನಿನ್ನ ಸೇವಕರುಗಳನ್ನೆಲ್ಲಾ ಕೊಂದು ಹಾಕಿದರು; ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಈ ವಿಷಯವನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಶೆಬದವರು ಅವುಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಸೇವಕರನ್ನು ಸಹ ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:15
13 ತಿಳಿವುಗಳ ಹೋಲಿಕೆ  

ಕೂಷನ ಮಕ್ಕಳು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು -‍ ಶೆಬಾ, ದೆದಾನ್ ಎಂಬ ಜನಾಂಗಗಳು.


ಅವುಗಳಿಗಾಗಿ ಹಂಬಲಿಸುತ್ತದೆ ಆ ತೇಮದ ಪ್ರಯಾಣಿಕರ ತಂಡ ಅವುಗಳಿಗಾಗಿ ಹಾತೊರೆಯುತ್ತದೆ ಶೆಬದ ವರ್ತಕರ ಪಂಗಡ.


ನಿಮ್ಮ ಪುತ್ರಪುತ್ರಿಯರನ್ನು ಯೆಹೂದ್ಯರಿಗೆ ಮಾರುವೆನು, ಅವರು ಆ ಮಕ್ಕಳನ್ನು ದೂರದಲ್ಲಿರುವ ಶೆಬದವರಿಗೆ ಮಾರಿಬಿಡುವರು. ಸರ್ವೇಶ್ವರನಾದ ನನ್ನ ನುಡಿಯಿದು.”


ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡುಕರು ನಾಡಾಡಿಗರೊಂದಿಗೆ ಸೇರಿ ಅಸ್ಸೀರಿಯರಿಬ್ಬರ ಕೈಗೆ ಕಡಗವನ್ನು ತೊಡಿಸಿ, ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು. ಮನೆ ಕುಸಿದುಬಿತ್ತು. ಯುವಕಯುವತಿಯರೆಲ್ಲ ಸತ್ತುಹೋದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ,” ಎಂದು ತಿಳಿಸಿದನು.


ಯೊಕ್ಷಾನನು ಶೆಬಾ, ದೆದಾನ್ ಎಂಬವರನ್ನು ಪಡೆದನು. ಅಶ್ಯೂರ್ಯರು, ಲೆಟೂಶ್ಯರೂ ಲೆಯುಮ್ಯರು ದೆದಾನನಿಂದ ಹುಟ್ಟಿದರು.


ಓಬಾಲ್, ಅಬೀಮಯೇಲ್, ಶೆಬಾ,


ಆಗ ದೇವದೂತನೊಬ್ಬನು ಯೋಬನ ಬಳಿಗೆ ಬಂದು, “ನಿಮ್ಮ ಎತ್ತುಗಳು ಉಳುತ್ತಾ ಇದ್ದವು; ಕತ್ತೆಗಳು ಹತ್ತಿರದಲ್ಲೆ ಮೇಯುತ್ತಾ ಇದ್ದವು.


ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದೇ ಬರುವನು. ನಡೆದ ಸಂಗತಿಯನ್ನು ನೀನು ಕಿವಿಯಾರೆ ಕೇಳುವಂತೆ ನಿನಗೆ ತಿಳಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು