Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:19 - ಕನ್ನಡ ಸತ್ಯವೇದವು C.L. Bible (BSI)

19 ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು. ಮನೆ ಕುಸಿದುಬಿತ್ತು. ಯುವಕಯುವತಿಯರೆಲ್ಲ ಸತ್ತುಹೋದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿದು, ಮನೆಯು ಯೌವನಸ್ಥರ ಮೇಲೆ ಬಿದ್ದಿತು. ಅವರೆಲ್ಲರು ಸತ್ತು ಹೋದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಗೋ ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು; ಮನೆಯು ಯೌವನಸ್ಥರ ಮೇಲೆ ಬಿದ್ದಿತು; ಸತ್ತು ಹೋದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಇದ್ದಕ್ಕಿದಂತೆ ಮರುಭೂಮಿಯಿಂದ ಬಿರುಗಾಳಿ ಬೀಸಿದ್ದರಿಂದ ಮನೆಯು ನಿನ್ನ ಗಂಡು ಹೆಣ್ಣುಮಕ್ಕಳ ಮೇಲೆ ಕುಸಿದು ಬಿದ್ದಿತು; ಅವರೆಲ್ಲಾ ಸತ್ತುಹೋದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದ್ದಕ್ಕಿದ್ದಂತೆ ಮರುಭೂಮಿ ಕಡೆಯಿಂದ ದೊಡ್ಡ ಗಾಳಿ ಬೀಸಿ, ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು. ಮನೆಯು ಯೌವನಸ್ಥರ ಮೇಲೆ ಬಿತ್ತು, ಅವರು ಸತ್ತುಹೋದರು. ನಾನೊಬ್ಬನು ಮಾತ್ರ, ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:19
12 ತಿಳಿವುಗಳ ಹೋಲಿಕೆ  

ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು.


ಉಳಿದ ಇಪ್ಪತ್ತೇಳು ಸಾವಿರಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆ ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು, ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು.


ಇದನ್ನು ಕೇಳಿದ್ದೇ ಅರಸನ ಎದೆಯೊಡೆಯಿತು. ಅವನು, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು! ಅಬ್ಷಾಲೋಮನೇ, ನನ್ನ ಮಗನೇ ಮಗನೇ,” ಎಂದು ಕೂಗಿ ಗೋಳಿಡುತ್ತಾ ಹೆಬ್ಬಾಗಿಲಿನ ಮೇಲಿದ್ದ ಕೋಣೆಗೆ ಹೋದನು.


“ನಾನು ಫಿಲಿಷ್ಟಿಯರ ಸಂಗಡ ಸಾಯುವೆನು,” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆ ಮನೆಯು ಅಧಿಪತಿಗಳ ಮೇಲೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದು ಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು.


ಆಗ ಅವರ ತಂದೆ ಯಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಜೋಸೆಫನು ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟದುಃಖವೆಲ್ಲ ನನ್ನ ತಲೆಯ ಮೇಲೆ ಬಂದೆರಗಿದೆ!” ಎಂದನು.


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”


ಅವನು ವರದಿಮಾಡುತ್ತಿದ್ದಾಗಲೇ ಬೇರೊಬ್ಬನು ಬಂದು, “ನಿಮ್ಮ ಪುತ್ರಪುತ್ರಿಯರು ಹಿರಿಯಣ್ಣನ ಮನೆಯಲ್ಲಿ ಔತಣದಲ್ಲಿದ್ದರು.


ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು