Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:21 - ಕನ್ನಡ ಸತ್ಯವೇದವು C.L. Bible (BSI)

21 ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:21
35 ತಿಳಿವುಗಳ ಹೋಲಿಕೆ  

ತಾಯಿಯ ಗರ್ಭದಿಂದ ಹೇಗೆ ಬರಿಗೈಯಲ್ಲಿ ಬಂದನೋ ಹಾಗೇ ಬರಿಗೈಯಲ್ಲಿ ಗತಿಸಿಹೋಗುತ್ತಾನೆ. ಅವನು ಪಟ್ಟ ಎಲ್ಲ ಪ್ರಯಾಸಕ್ಕಾಗಿ ತನ್ನ ಕೈಯಲ್ಲಿ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ.


ಹುಟ್ಟಿದಾಗ ನಾವು ಈ ಲೋಕಕ್ಕೆ ಏನನ್ನೂ ತರಲಿಲ್ಲ; ಸಾಯುವಾಗ ಏನನ್ನೂ ಕೊಂಡು ಒಯ್ಯುವುದಿಲ್ಲ.


ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ಯಾವಾಗಲೂ ಎಲ್ಲ ವರಗಳಿಗಾಗಿಯೂ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ಸಾಯುವಾಗ ಏನನೂ ಕೊಂಡು ಹೋಗುವುದಿಲ್ಲ I ಘನತೆ ಅವನ ಬೆನ್ನು ಹತ್ತಿ ಹೋಗುವಂತಿಲ್ಲ II


ಬಡತನ, ಸಿರಿತನ ಕೊಡುವವನು ಆ ಸರ್ವೇಶ್ವರನೇ ತಗ್ಗಿಸುವವನು, ಹೆಚ್ಚಿಸುವವನು ಆತನೇ.


ಒಳಿತು-ಕೇಡು ಸಂಭವಿಸುವುದು ಪರಾತ್ಪರನ ಮಾತಿನಿಂದ ಅಲ್ಲವೆ?


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ಮೌನದಿಂದಿರುವೆ, ಬಾಯ್ದೆರೆಯದಿರುವೆ I ನನಗೊದಗಿರುವುದು ನಿನ್ನಿಂದಲ್ಲವೆ? II


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ಕೊಟ್ಟವರಾರು ಯಕೋಬನ್ನು ಸುಲಿಗೆಗೆ, ಇಸ್ರಯೇಲನ್ನು ಕೊಳ್ಳೆಗೆ? ಯಾವ ಸರ್ವೇಶ್ವರನಿಗೆ ದ್ರೋಹಮಾಡಿದ್ದೇವೋ ಆತನೇ ಅಲ್ಲವೇ? ಜನರು ಆತನ ಮಾರ್ಗದಲ್ಲಿ ನಡೆಯದೇ, ಆತನ ಉಪದೇಶವನ್ನು ಕೇಳದೆಹೋದರಲ್ಲವೆ?


ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು I ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು II


ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ. ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು.


ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.


ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ವ್ಯಸನಪಡಬೇಡಿ, ನಿಮ್ಮನ್ನೇ ನಿಂದಿಸಿಕೊಳ್ಳಬೇಡಿ. ಏಕೆಂದರೆ ಜೀವರಕ್ಷಣೆಗಾಗಿಯೇ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಇಲ್ಲಿಗೆ ಕಳುಹಿಸಿದರು.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಎಂದೇ ಮೂಡಣದವರೇ, ಸನ್ಮಾನಿಸಿರಿ ಸರ್ವೇಶ್ವರ ಸ್ವಾಮಿಯನು, ಕರಾವಳಿಯವರೇ, ಘನಪಡಿಸಿರಿ ಇಸ್ರಯೇಲಿನ ದೇವರಾದ ಸ್ವಾಮಿಯ ನಾಮವನು.


ದೇವರು ಯಾರಿಗಾದರು ಆಸ್ತಿಪಾಸ್ತಿಯನ್ನು ದಯಪಾಲಿಸಿ, ಅದನ್ನು ಅನುಭವಿಸುವ, ಪಾಲಿಗೆ ಬಂದದ್ದನ್ನು ಸವಿಯುವ, ಶ್ರಮದಲ್ಲೂ ಸಂತೋಷಪಡುವ ಶಕ್ತಿಯನ್ನು ಕೊಟ್ಟಿದ್ದರೆ ಅದು ಅವನ ಭಾಗ್ಯ; ಅದು ದೇವರ ಅನುಗ್ರಹವೇ ಸರಿ.


‘ನನ್ನ ಜೀವಮಾನದಲ್ಲಿ ಹೇಗೂ ಸೌಭಾಗ್ಯವಿದ್ದರೆ ಸಾಕು’ ಎಂದುಕೊಂಡ ಹಿಜ್ಕೀಯನು ಯೆಶಾಯನಿಗೆ, “ನೀವು ತಿಳಿಸಿದ ಸರ್ವೇಶ್ವರನ ಮಾತು ಹಿತಕರವಾಗಿದೆ,” ಎಂದು ಉತ್ತರಕೊಟ್ಟನು.


ಅವನು ಜನರ ಮಾತನ್ನು ಕೇಳದೆಹೋದದ್ದು ಸರ್ವೇಶ್ವರನಿಂದಲೇ ಸಂಭವಿಸಿತ್ತು. ಹೀಗೆ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ಯಕೋಬನು ಆಕೆಯ ಮೇಲೆ ಸಿಟ್ಟುಗೊಂಡು, "ನಾನೇನು ದೇವರೋ? ಅವರೇ ಅಲ್ಲವೆ ನಿನಗೆ ಮಕ್ಕಳನ್ನು ಕೊಡದೆ ಇರುವುದು?” ಎಂದು ಉತ್ತರಕೊಟ್ಟನು.


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ಸಿರಿವಂತಳಾಗಿ ಇಲ್ಲಿಂದ ಹೋದೆ. ಗತಿಹೀನಳನ್ನಾಗಿ ಸರ್ವೇಶ್ವರ ನನ್ನನ್ನು ಹಿಂದಕ್ಕೆ ಕರೆತಂದಿದ್ದಾರೆ. ಹೀಗೆ ಸರ್ವಶಕ್ತ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವಾಗ ನೀವು ನನ್ನನ್ನು ನವೊಮಿ ಎಂದು ಕರೆಯುವುದು ಸರಿಯೇ?’ ಎಂದು ಉತ್ತರಕೊಟ್ಟಳು.


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ಕಿತ್ತುಕೊಂಡು ಹೋಗುವ ಆತನಿಗೆ ಅಡ್ಡಿಮಾಡುವವರಾರು? ‘ಏನು ಮಾಡುತ್ತಿರುವೆ?’ ಎಂದು ಆತನನ್ನು ಕೇಳುವವರಾರು?


ಪ್ರಭುವಿನಲ್ಲಿದೆ ನನ್ನ ಮನದಭಿಮಾನ I ದೀನರಿದನು ಕೇಳಿ, ಪಡೆಯಲಿ ಸುಮ್ಮಾನ I


ಆ ಆಸ್ತಿ ನಿರರ್ಥಕ ಪ್ರಯತ್ನದಿಂದ ನಷ್ಟವಾಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು