5 ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.
5 ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.
5 ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.
5 ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.
5 ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.
ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.
ಹೌದು, ಶುಭಕರವಾಗಿದೆ; ಸರ್ವೇಶ್ವರನಿಗೆ ಬಲಿಯನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ಶುದ್ಧರಾಗಿ ನನ್ನ ಜೊತೆಯಲ್ಲಿ ಬಲಿಯರ್ಪಣೆಗೆ ಬನ್ನಿ,” ಎಂದು ಹೇಳಿ ಜೆಸ್ಸೆಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಬಲಿಯರ್ಪಣೆಗೆ ಆಮಂತ್ರಿಸಿದನು. ಅವರು ಬಂದರು.
ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.
ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.
ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.
ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.
ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.
ಅಂತೆಯೇ ಪೌಲನು ಮಾರನೆಯ ದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ಮಹಾದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.
ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.
ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.
ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.