Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:8 - ಕನ್ನಡ ಸತ್ಯವೇದವು C.L. Bible (BSI)

8 ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಯೆಹೋವನು, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ, ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ” ಎಂದು ಸೈತಾನನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:8
29 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ದೇವರು ನಿರ್ದೋಷಿಯನು ತ್ಯಜಿಸಿಬಿಡುವುದಿಲ್ಲ ಕೆಡುಕರಿಗೆ ನೆರವಾಗಲು ಆತ ಕೈ ನೀಡುವುದಿಲ್ಲ.


ಸರ್ವೇಶ್ವರನಿಗೆ ಅಭಿಮುಖನಾಗಿ, ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಈ ಯೋಷೀಯನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಅವರು ಆಡಿದ ಮಾತು ಸರ್ವೇಶ್ವರನಿಗೆ ಮುಟ್ಟಿತು. ಮೋಶೆ ಸಾಧುಮನುಷ್ಯ. ನರಮಾನವರಲ್ಲೆಲ್ಲಾ ಅತ್ಯಂತ ಸಾಧು.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಪಾಪದಲಿ ಬೀಳದೆ ನಡೆದೆ ಎಚ್ಚರಿಕೆಯಾಗಿ I ಆತನ ದೃಷ್ಟಿಯಲಿದ್ದೆ ನಿರ್ದೋಷಿಯಾಗಿ II


ದೇವರು ಮನಸ್ಸುಮಾಡಿ ತನ್ನ ಆತ್ಮವನ್ನು ಹಿಂದಕ್ಕೆ ತೆಗೆದುಕೊಂಡನಾದರೆ ತನ್ನ ಶ್ವಾಸವನ್ನು ಹಿಂದಕೆ ಎಳೆದುಕೊಂಡನಾದರೆ,


ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.


ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು.


“ನನ್ನ ದಾಸ ದಾವೀದನನು ಗುರುತಿಸಿರುವೆ I ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ II


ಕೆಟ್ಟದನು ಬಿಡು, ಒಳ್ಳೆಯದನು ಮಾಡು I ಸಿರಿನಾಡಿನಲಿ ಚಿರಕಾಲ ಬಾಳು II


ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II


ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


ನೀನೀಗ ಎದ್ದು ಸಮಸ್ತ ಪ್ರಜೆಯೊಂದಿಗೆ ಜೋರ್ಡನ್ ನದಿಯನ್ನು ದಾಟಿ, ನಾನು ಇಸ್ರಯೇಲರಿಗೆ ಕೊಡುವ ನಾಡಿಗೆ ಹೋಗು.


ಸ್ವರ್ಗನಿವಾಸಿಗಳು ಇನ್ನೊಂದು ದಿನ ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನು ಅವರ ಮಧ್ಯೆ ಕಾಣಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು