Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:14 - ಕನ್ನಡ ಸತ್ಯವೇದವು C.L. Bible (BSI)

14 ನಾನು ತಪ್ಪುಮಾಡಿದರೆ ಅದನು ಕಂಡುಹಿಡಿದು ಆ ದೋಷಕ್ಕೆ ಕ್ಷಮೆ ನೀಡಕೂಡದೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; ನನ್ನ ದೋಷವನ್ನು ಕ್ಷಮಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದೇನಂದರೆ - ನಾನು ತಪ್ಪುಮಾಡಿದರೆ ನೀನು ಗಮನಿಸುತ್ತೀ; ನನ್ನ ದೋಷವನ್ನು ಕ್ಷವಿುಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಪಾಪ ಮಾಡಿದರೆ ನೀನು ನನ್ನನ್ನು ಗಮನಿಸುವೆ; ನಾನು ಮಾಡಿದ ತಪ್ಪಿಗಾಗಿ ನನ್ನನ್ನು ಶಿಕ್ಷಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದೇನೆಂದರೆ, ನಾನು ಒಂದು ವೇಳೆ ಪಾಪಮಾಡಿದರೆ, ನೀವು ಅದನ್ನು ಕಂಡುಹಿಡಿದು ನನ್ನ ಅಪರಾಧಕ್ಕಾಗಿ ನನ್ನನ್ನು ದಂಡಿಸದೇ ಬಿಡುವುದಿಲ್ಲ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:14
13 ತಿಳಿವುಗಳ ಹೋಲಿಕೆ  

ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II


ಪ್ರಭು, ಪರಿಶೋಧಿಸಿರುವೆ ನೀ ನನ್ನನು I ಅರಿತುಕೊಂಡಿರುವೆ ಅಂತರಂಗವನು II


ಸಮಸ್ತ ದುಃಖದುಗುಡಗಳ ನೆನಪು ನನಗೆ ತರುತ್ತವೆ ದಿಗಿಲು ನನಗೆ ಗೊತ್ತು, ನೀ ನನ್ನನು ನಿರಪರಾಧಿ ಎಂದೆಣಿಸಲಾರೆಯೆಂದು.


‘ಸರ್ವೇಶ್ವರ ದೀರ್ಘಶಾಂತನು, ಪ್ರೀತಿಮಯನು, ಪಾಪ-ಅಪರಾಧಗಳನ್ನು ಕ್ಷಮಿಸುವವನು, ಆದರೂ ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು,’ ಎಂದು ಹೇಳಿದ್ದೀರಿ. ಆ ಮಾತನ್ನು ನೆನಪಿಗೆ ತಂದುಕೊಳ್ಳಿ.


ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.


ಆಗ ನನ್ನ ಹೆಜ್ಜೆಹೆಜ್ಜೆಗಳನು ನೀ ಲೆಕ್ಕಿಸುವೆ ನನ್ನ ಪಾಪ ಹುಡುಕಲು ನೀ ಕಾವಲು ಇಡಲಾರೆ.


ನರಮಾನವರ ಮೇಲೆ ಬೆಂಗಾವಲಿರುವವನೇ, ಭಾರವಾಗಿರುವೆನು ನನಗೆ ನಾನೇ. ನಾನು ಪಾಪಮಾಡಿದ್ದಾದರೂ ನಿನಗೇನು ಮಾಡಿದೆ? ನನ್ನನ್ನೇಕೆ ನಿನ್ನ ಹೊಡೆತಕ್ಕೆ ಗುರಿಪಡಿಸಿದೆ?


‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.


ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.


ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು