Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:16 - ಕನ್ನಡ ಸತ್ಯವೇದವು C.L. Bible (BSI)

16 ನಾನು ತಲೆಯೆತ್ತಿದರೆ ಬೇಟೆಯಾಡುವೆ ನನ್ನನ್ನು ಸಿಂಹದಂತೆ ಮತ್ತೆ ನಿನ್ನ ಶಕ್ತಿ ಸಾಮರ್ಥ್ಯವನ್ನು ನನ್ನ ಮೇಲೆ ಪ್ರಯೋಗಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ; ನಿನ್ನ ಅದ್ಭುತ ಚಮತ್ಕಾರವನ್ನು ತಿರುಗಿ ನನ್ನಲ್ಲಿ ತೋರಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ. ನಿನ್ನ ಅದ್ಭುತಚಮತ್ಕಾರವನ್ನು ತಿರಿಗಿ ನನ್ನಲ್ಲಿ ತೋರಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ತಲೆಯೆತ್ತಿದರೆ ನೀನು ಸಿಂಹದಂತೆ ನನ್ನನ್ನು ಬೇಟೆಯಾಡುವೆ; ನಿನ್ನ ಶಕ್ತಿಯನ್ನು ನನಗೆ ವಿರೋಧವಾಗಿ ಮತ್ತೆ ತೋರಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ತಲೆಯೆತ್ತಿದರೆ, ಸಿಂಹದಂತೆ ನನ್ನನ್ನು ಬೇಟೆಯಾಡುತ್ತೀರಿ; ನನ್ನ ವಿರುದ್ಧ ನಿಮ್ಮ ಅದ್ಭುತ ಶಕ್ತಿಯನ್ನು ಪ್ರದರ್ಶಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:16
11 ತಿಳಿವುಗಳ ಹೋಲಿಕೆ  

ಸಿಂಹವು ಮೇಲೆಬಿದ್ದು ಮೂಳೆ ಮುರಿದಂತೆ ನನಗಾಗುತ್ತಿತ್ತು ಅತೀವ ಬಾಧೆ, ಆದರೂ ಇರುಳೆಲ್ಲ ಮೊರೆಯಿಡುತ್ತಿದ್ದೆ ಬೆಳಗು ಬೈಗಿನೊಳಗೆ ನೀ ನನ್ನ ಮುಗಿಸುತ್ತಿರುವೆನೆಂದೆ.


ನನಗಾಗಿ ಆತ ಹೊಂಚುಹಾಕುತ್ತಿರುವನು ಕರಡಿಯಂತೆ ಗುಹೆಯಲ್ಲಿ ಅಡಗಿಕೊಂಡಿರುವನು ಸಿಂಹದಂತೆ.


ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”


ಅವರು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವರು. ದೀರ್ಘಕಾಲ ವಾಸಿಯಾಗದ ಘೋರವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವರು.


ನೀನೇಕೆ ನನಗೆ ವಿಮುಖನಾಗಿರುವೆ? ನನ್ನನ್ನೇಕೆ ಶತ್ರು ಎಂದೆಣಿಸುವೆ?


ದೇವರ ಸಿಟ್ಟು ಸೀಳಿ ಹಾಳುಮಾಡುತ್ತಿದೆ ಆತ ನನ್ನನ್ನು ನೋಡಿ ಹಲ್ಲುಕಡಿದಿದ್ದಾನೆ ನನ್ನ ವೈರಿ ನನ್ನನ್ನು ದುರುಗುಟ್ಟಿ ನೋಡುತ್ತಿದ್ದಾನೆ.


ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು