Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:2 - ಕನ್ನಡ ಸತ್ಯವೇದವು C.L. Bible (BSI)

2 ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ದೇವರ ಮುಂದೆ - ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಅನ್ನುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ. ನನ್ನ ಮೇಲೆ ನಿಮಗಿರುವ ಆಪಾದನೆಗಳನ್ನು ನನಗೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:2
20 ತಿಳಿವುಗಳ ಹೋಲಿಕೆ  

ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II


ಅಪರಾಧಿಯೆಂದೇ ನನಗೆ ನಿರ್ಣಯವಾಗಬೇಕಿದ್ದಲ್ಲಿ ನಾನೇಕೆ ಪ್ರಯಾಸಪಡಬೇಕು ವ್ಯರ್ಥವಾಗಿ?


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಹೇ ಪ್ರಭು, ದೇವಾ, ನನ್ನನಾದರಿಸು ಅಕ್ಕರೆಯಿಂದ I ನನ್ನ ಪಕ್ಷವಹಿಸಿ ರಕ್ಷಿಸು ನಿನ್ನ ನಾಮದ ಪ್ರಯುಕ್ತ II


ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


ಯಾರಾದರೂ ಆತನೊಡನೆ ವಾದಿಸಲು ಇಷ್ಟಪಟ್ಟರೂ ಆತನ ಸಹಸ್ರ ಪ್ರಶ್ನೆಗಳೊಂದಕ್ಕೂ ಉತ್ತರಿಸಲಾಗದು.


“ಸರ್ವಶಕ್ತನೊಡನೆ ವ್ಯಾಜ್ಯವಾಡುವುದನು ಈಗಲಾದರು ನಿಲ್ಲಿಸುವೆಯಾ? ದೇವರೊಡನೆ ತರ್ಕಮಾಡುವಂಥ ನೀನು ಉತ್ತರಕೊಡುವೆಯಾ?”


ನರಮಾನವರ ಮೇಲೆ ಬೆಂಗಾವಲಿರುವವನೇ, ಭಾರವಾಗಿರುವೆನು ನನಗೆ ನಾನೇ. ನಾನು ಪಾಪಮಾಡಿದ್ದಾದರೂ ನಿನಗೇನು ಮಾಡಿದೆ? ನನ್ನನ್ನೇಕೆ ನಿನ್ನ ಹೊಡೆತಕ್ಕೆ ಗುರಿಪಡಿಸಿದೆ?


ನನ್ನ ಅಕ್ರಮಗಳೆಷ್ಟು? ಪಾಪಗಳೆಷ್ಟು? ನನ್ನ ಪಾಪದೋಷಗಳನ್ನು ತಿಳಿಯಪಡಿಸು.


ನನ್ನ ದೂರು ಮನುಷ್ಯನ ವಿರುದ್ಧವೆ? ಸಾಕಷ್ಟು ಕಾರಣವಿರಲು, ನಾನು ಬೇಸರಗೊಳ್ಳಬಾರದೆ?


ಆತ ನಿನ್ನ ಯಾವ ಮಾತಿಗೂ ಉತ್ತರ ಕೊಡಲಿಲ್ಲ ಎಂದ ಮಾತ್ರಕ್ಕೆ ನೀನು ಆತನೊಡನೆ ವ್ಯಾಜ್ಯವಾಡುವುದು ಸರಿಯಲ್ಲ.


ಪ್ರಭೂ, ನಿನಗೆ ಮೊರೆಯಿಡುವೆನು I ಕರುಣಿಸೆನಗೆ ಸದುತ್ತರವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು