Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:22 - ಕನ್ನಡ ಸತ್ಯವೇದವು C.L. Bible (BSI)

22 ಕಾರ್ಗತ್ತಲೂ ಗಾಢಾಂಧಕಾರವೂ ಅಲ್ಲಿವೆ ಅರಾಜಕತೆಯೂ ಕಾರಿರುಳೂ ಅದನು ಆವರಿಸಿವೆ ಬೆಳಕೇ ಕಾರಿರುಳಾಗಿ ಆ ನಾಡನ್ನು ಕವಿದಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ, ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ, ಅದರ ಬೆಳಕು ರಾತ್ರಿಯ ಬೆಳಕಿನಂತೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ರಾತ್ರಿಗೂ ಮರಣಾಂಧಕಾರಕ್ಕೂ ಸಮಾನವಾದ ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ, ಅದರ ಬೆಳಕು ರಾತ್ರಿಯ ತಮಸ್ಸೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಸ್ಥಳವು ಕತ್ತಲೆಯಿಂದಲೂ ಮರಣಾಂಧಕಾರದಿಂದಲೂ ಗಲಿಬಿಲಿಯಿಂದಲೂ ಕೂಡಿದೆ. ಅಲ್ಲಿನ ಬೆಳಕು ಸಹ ಕತ್ತಲೆಯೇ!’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ದೇಶದಲ್ಲಿ ಕಾರ್ಗತ್ತಲೂ, ಗಾಢಾಂಧಕಾರವೂ ಮರಣದ ತುಂಬಿರುವುದು. ಕ್ರಮವಿಲ್ಲದ ಆ ದೇಶದಲ್ಲಿ ಬೆಳಕೂ ಕತ್ತಲೆಯೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:22
15 ತಿಳಿವುಗಳ ಹೋಲಿಕೆ  

ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿಬರಲೂ ಸಾಧ್ಯವಿಲ್ಲ,’ ಎಂದ.


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ತಿಳಿವರೆ ನಿನ್ನ ಪವಾಡಗಳನು ಇರುಳ ನಿಶೆಯೊಳು? I ನಿನ್ನ ನ್ಯಾಯ ನೀತಿಯನು ಮರೆವಾ ಲೋಕದೊಳು? II


ಆದರೂ ನಮ್ಮನ್ನು ತಂದು ನಾಯಿನರಿಗಳ ಪಾಲಾಗಿಸಿರುವೆ I ಕಾರ್ಗತ್ತಲೆಮ್ಮನು ಸುತ್ತುವರಿಯುವಂತೆ ಮಾಡಿರುವೆ II


ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ಮರಣದ ದ್ವಾರಗಳು ನಿನಗೆ ಗೋಚರವಾಗಿರುವುವೋ? ಘೋರಾಂಧಕಾರದ ಕದಗಳನ್ನು ನೀನು ಕಂಡಿರುವೆಯೋ?


ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.


ಕಾರ್ಮೋಡಗಳು ಅದನ್ನು ಕವಿಯಲಿ ಇರುಳೂ ಮರಣದ ನೆರಳೂ ಅದನ್ನು ಆಕ್ರಮಿಸಲಿ ಹಗಲನ್ನೇ ಮಬ್ಬಾಗಿಸುವ ಮುಸುಕು ಅದನ್ನು ಹೆದರಿಸಲಿ.


ಆಗ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ ಕಣ್ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆ.


ಮರಳಿ ಹಿಂದಿರುಗಲಾಗದ ನಾಡನು ನಾನು ಸೇರಲಿರುವೆ ಅಂಧಕಾರವೂ ಗಾಢಾಂಧಕಾರವೂ ಅಲ್ಲಿ ತುಂಬಿವೆ.


ಆಗ ನಾಮಾಥ್ಯನಾದ ಚೋಫರನು ಹೀಗೆಂದ:


ಪಾತಾಳವನ್ನೇ ನನ್ನ ಮನೆಯೆಂದು ನಾನು ಭಾವಿಸಿದೆನಾದರೆ ಕತ್ತಲಲ್ಲೇ ನನ್ನ ಹಾಸಿಗೆಯನ್ನು ಹಾಕಿಕೊಂಡೆನಾದರೆ,


ನಾನಾದರೋ ಪ್ರಭೂ, ಮೊರೆಯಿಡುವೆ ನಿನಗೆ I ಉದಯದಲೆ ಸೇರುವುದೆನ್ನ ಜಪ ನಿನ್ನ ಸನ್ನಿಧಿಗೆ II


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು