Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:3 - ಕನ್ನಡ ಸತ್ಯವೇದವು C.L. Bible (BSI)

3 ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ, ಬಾಧಿಸುವುದು ನಿನಗೆ ಸಂತೋಷವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ ಬಾಧಿಸುವದು ನಿನಗೆ ಸಂತೋಷವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ? ನಿನ್ನ ಸೃಷ್ಟಿಯ ಬಗ್ಗೆ ನೀನು ಚಿಂತಿಸದಂತೆ ತೋರುತ್ತಿದೆ. ದುಷ್ಟರ ಆಲೋಚನೆಗಳಲ್ಲಿ ನಿನಗೆ ಸಂತೋಷವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರೇ, ನಿಮ್ಮ ಕೈಕೃತಿಯಾಗಿರುವ ನನ್ನನ್ನು ಜಜ್ಜುವುದೂ ನಿಮಗೆ ಮೆಚ್ಚಿಕೆಯೋ? ನೀವು ನನ್ನನ್ನು ಅಲಕ್ಷ್ಯ ಮಾಡುವಿರೋ? ನೀವು ದುಷ್ಟರ ಯೋಜನೆಯನ್ನು ಮೆಚ್ಚುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:3
27 ತಿಳಿವುಗಳ ಹೋಲಿಕೆ  

ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ಸಿದ್ಧಿಗೆ ತರುವೆ ನೀ ಪ್ರಭು, ನನ್ನ ಕಾರ್ಯವನು I ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II


ಆಗ ನೀನು ಕರೆದರೆ ನಾನು ಉತ್ತರಕೊಡುವೆ ನಿನ್ನ ಈ ಸೃಷ್ಟಿಯ ಮೇಲೆ ಹುಟ್ಟೀತು ನಿನಗೆ ಮಮತೆ!


ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.


ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು I ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು II


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


“ಸರ್ವಶಕ್ತನೊಡನೆ ವ್ಯಾಜ್ಯವಾಡುವುದನು ಈಗಲಾದರು ನಿಲ್ಲಿಸುವೆಯಾ? ದೇವರೊಡನೆ ತರ್ಕಮಾಡುವಂಥ ನೀನು ಉತ್ತರಕೊಡುವೆಯಾ?”


ಅಲ್ಲದೆ, ‘ಸರ್ವಶಕ್ತ ನಮಗೇನು ಮಾಡಬಲ್ಲ?’ ಎಂದುಕೊಂಡರು ಅಕಟ, ನನ್ನಿಂದ ದೂರ ಇರಲಿ! ದುರುಳರ ಈ ಮಾತು.


ಆಹಾ! ಸದ್ಯಕ್ಕೆ ಸುಖಶಾಂತಿ ನೆಲಸಿಲ್ಲ ಅವರ ಕೈಯಲಿ ಆ ದುರುಳರ ಆಲೋಚನೆ ನನ್ನಿಂದ ದೂರವಿರಲಿ.


ದೇಶವು ದುರುಳರ ಕೈವಶವಾಗಿದ್ದರೂ ನ್ಯಾಯಾಧೀಶರ ಮುಖಕ್ಕೆ ಮುಸುಕುಹಾಕುತ್ತಾನೆ. ಇದನ್ನು ಮಾಡುವವರು ದೇವರಲ್ಲದೆ ಮತ್ತೆ ಯಾರು?


ಎಲ್ಲವೂ ಒಂದೇ ಆಗಿಬಿಟ್ಟಿದೆ. ಆದ್ದರಿಂದಲೇ ಇಂತೆನ್ನುತ್ತೇನೆ: ‘ದೋಷಿಯೋ ನಿರ್ದೋಷಿಯೋ’ ದೇವರು ಎಲ್ಲರನೂ ನಾಶಗೊಳಿಸುತ್ತಾನೆ.


ದೇವರು ನಿರ್ದೋಷಿಯನು ತ್ಯಜಿಸಿಬಿಡುವುದಿಲ್ಲ ಕೆಡುಕರಿಗೆ ನೆರವಾಗಲು ಆತ ಕೈ ನೀಡುವುದಿಲ್ಲ.


ನನ್ನನ್ನು ನಿರ್ಮಿಸಿ ರೂಪಿಸಿದಾತ ನೀನು ಆದರೆ ಈಗ ಮುಗಿಸಿಬಿಡುವಿಯೋ ಮಾನಸಾಂತರಗೊಂಡು?


ದೇವರು ನನ್ನನ್ನೊಪ್ಪಿಸಿಬಿಟ್ಟಿದ್ದಾನೆ ತುಂಟರಿಗೆ ನನ್ನನ್ನು ಎಸೆದುಬಿಟ್ಟಿದ್ದಾನೆ ದುಷ್ಟರ ಕೈಗೆ.


ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ:


“ನನಗೆ ನ್ಯಾಯ ದೊರಕಿಸದ ಜೀವಂತ ದೇವರಾಣೆ, ನನ್ನ ಮನಸ್ಸನು ಕಹಿಯಾಗಿಸಿದ ಸರ್ವಶಕ್ತನಾಣೆ.


ನನಗೆ ನೀನು ಕ್ರೂರನಾಗಿಬಿಟ್ಟಿರುವೆ ನಿನ್ನ ಭುಜಬಲದಿಂದ ಹಿಂಸಿಸುತ್ತಿರುವೆ.


ತಾಯಗರ್ಭದಲ್ಲಿ ನನ್ನ ನಿರ್ಮಿಸಿದಾತನೆ ಅವರನೂ ನಿರ್ಮಿಸಲಿಲ್ಲವೆ? ತಾಯಗರ್ಭದಲ್ಲಿ ನಮ್ಮನು ರೂಪಿಸಿದಾತ ಅದೇ ದೇವರಲ್ಲವೆ?


ನಾನು ನಿರ್ಮಿತನಾಗಿದ್ದೇನೆ ದೇವರಾತ್ಮನಿಂದ ನನಗೆ ಜೀವ ಉಂಟಾಗಿದೆ ಸರ್ವಶಕ್ತನ ಶ್ವಾಸದಿಂದ.


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ದೇವರಿಗೆ ವಿರುದ್ಧ ಕುದಿಯುತ್ತಿರುವೆ ಏಕೆ? ಬಾಯಿಂದ ಮಾತು ಹರಿಯುತ್ತಿವೆ ಏಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು