Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:8 - ಕನ್ನಡ ಸತ್ಯವೇದವು C.L. Bible (BSI)

8 ನನ್ನನ್ನು ನಿರ್ಮಿಸಿ ರೂಪಿಸಿದಾತ ನೀನು ಆದರೆ ಈಗ ಮುಗಿಸಿಬಿಡುವಿಯೋ ಮಾನಸಾಂತರಗೊಂಡು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ, ಈಗ ಮನಸ್ಸನ್ನು ಬೇರೆ ಮಾಡಿಕೊಂಡು ನನ್ನನ್ನು ನಾಶ ಮಾಡಿಬಿಡುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ ಈಗ ಮನಸ್ಸು ಬೇರೆ ಮಾಡಿಕೊಂಡು ನನ್ನನ್ನು ನಾಶನ ಮಾಡಿಬಿಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನನ್ನು ಸೃಷ್ಟಿಸಿದ್ದೂ ನನ್ನ ದೇಹವನ್ನು ರೂಪಿಸಿದ್ದೂ ನಿನ್ನ ಕೈಗಳೇ. ಈಗ ಮನಸ್ಸು ಬೇರೆಮಾಡಿಕೊಂಡು ನೀನು ನನ್ನನ್ನು ನಾಶಮಾಡುತ್ತಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಿಮ್ಮ ಕೈಗಳು ನನ್ನನ್ನು ನಿರ್ಮಿಸಿದೆ, ನೀವೇ ನನ್ನನ್ನು ರೂಪಿಸಿದವರು; ಈಗ ನೀವೇ ನನಗೆ ವಿಮುಖರಾಗಿ ನನ್ನನ್ನು ತೆಗೆದುಹಾಕುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:8
14 ತಿಳಿವುಗಳ ಹೋಲಿಕೆ  

ನನ್ನನು ನಿರ್ಮಿಸಿ ರೂಪಿಸಿವೆ ನಿನ್ನ ಕೈಗಳು I ನೀಡು ಬುದ್ಧಿಯನು ನಿನ್ನಾಜ್ಞೆಗಳನು ಕಲಿಯಲು II


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?


ಎಲ್ಲವೂ ಒಂದೇ ಆಗಿಬಿಟ್ಟಿದೆ. ಆದ್ದರಿಂದಲೇ ಇಂತೆನ್ನುತ್ತೇನೆ: ‘ದೋಷಿಯೋ ನಿರ್ದೋಷಿಯೋ’ ದೇವರು ಎಲ್ಲರನೂ ನಾಶಗೊಳಿಸುತ್ತಾನೆ.


ದೇವಾ, ನನ್ನ ಮೇಲೆ ಆಪಾದನೆ ಹೊರಿಸಲು ಬರುವೆಯಾ? ಹಾಗಾದರೆ ಮೌನತಾಳಿ ನಾ ಮಾಡುವೆ ಪ್ರಾಣತ್ಯಾಗ.


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ಅವರೆಲ್ಲರ ಹೃದಯಗಳನು ನಿರ್ಮಿಸಿದಾತನವನು I ಅವರವರ ಕೃತ್ಯಗಳನು ಪರೀಕ್ಷಿಸುತಿಹನು II


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಸಿದ್ಧಿಗೆ ತರುವೆ ನೀ ಪ್ರಭು, ನನ್ನ ಕಾರ್ಯವನು I ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II


ನನ್ನ ಅಸ್ಥಿಪಂಜರವನು ರೂಪಿಸುವಾಗ I ತಾಯಗರ್ಭದೊಳು ಅಚ್ಚರದಿ ರಚಿಸುವಾಗ I ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ I ಮರೆಯಾಗಿರಲಿಲ್ಲ ನಾನು ನಿನಗಾಗ II


ನಾನಿನ್ನೂ ಭ್ರೂಣವಾಗಿದ್ದಾಗ ನೋಡಿದವು ನಿನ್ನ ಕಣ್ಣುಗಳು I ಪ್ರಾರಂಭವಾಗುವುದಕ್ಕೆ ಮುನ್ನ ನನ್ನ ಆಯುಷ್ಕಾಲದ ದಿನಗಳು I ಲಿಖಿತವಾದವು ಅವುಗಳಲೊಂದೂ ತಪ್ಪದೆ ನಿನ್ನ ಪುಸ್ತಕದೊಳು II


ನನ್ನನ್ನು ಬಿರುಗಾಳಿಯಿಂದ ಬಡಿಯುತ್ತಾನೆ ಕಾರಣವಿಲ್ಲದೆ ಗಾಯದ ಮೇಲೆ ಗಾಯ ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು