Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:9 - ಕನ್ನಡ ಸತ್ಯವೇದವು C.L. Bible (BSI)

9 ಜೇಡಿಮಣ್ಣಿನಿಂದ ನನ್ನನ್ನು ಮಾಡಿದೆಯೆಂದು ನೆನೆಸಿಕೊ ಆದರೆ ಈಗ ಮರಳಿ ಮಣ್ಣಾಗುವಂತೆ ಮಾಡುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನನ್ನನ್ನು ಜೇಡಿಮಣ್ಣಿನಿಂದಲೇ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರುಗಿ ಮಣ್ಣಾಗುವಂತೆ ಮಾಡುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ನನ್ನನ್ನು ಜೇಡಿಮಣ್ಣಿನಿಂದಲೋ ಎಂಬಂತೆ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರಿಗಿ ಮಣ್ಣಾಗುವಂತೆ ಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರೇ, ನೀನು ನನ್ನನ್ನು ಜೇಡಿಮಣ್ಣಿನಂತೆ ಮಾಡಿರುವೆ ಎಂಬುದನ್ನು ಜ್ಞಾಪಿಸಿಕೋ. ಈಗ ನನ್ನನ್ನು ಮತ್ತೆ ಧೂಳನ್ನಾಗಿ ಯಾಕೆ ಮಾರ್ಪಡಿಸುತ್ತಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಈಗ ನೀವೇ ನನ್ನನ್ನು ಮಣ್ಣಿಗೆ ಸೇರಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:9
25 ತಿಳಿವುಗಳ ಹೋಲಿಕೆ  

ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


“ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ.


ಒಂದೇ ಮಣ್ಣಿನ ಮುದ್ದೆಯಿಂದ ಎರಡು ಕುಡಿಕೆಗಳನ್ನು ಅಂದರೆ ಒಂದನ್ನು ವಿಶೇಷ ಬಳಕೆಗೂ ಇನ್ನೊಂದನ್ನು ಸಾಮಾನ್ಯ ಬಳಕೆಗೂ ಮಾಡುವ ಅಧಿಕಾರ ಕುಂಬಾರನಿಗೆ ಇಲ್ಲವೆ?


ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?


ಮರೆಯಬೇಡೆನ್ನನು ಪ್ರಭು, ನಿನ್ನ ಪ್ರಜೆಗೆ ದಯೆತೋರುವಾಗ I ನೆರವು ನೀಡೆನಗೆ ಸ್ವಾಮಿ, ನೀನಾ ಜನರನು ಉದ್ಧರಿಸುವಾಗ II


ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ I ‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ II


ಎಷ್ಟು ಅಲ್ಪವಾದುದೆನ್ನ ಜೀವಮಾನಕಾಲ I ಎಷ್ಟು ನಶ್ವರ ನೀ ನಿರ್ಮಿಸಿದ ಮಾನವ ಕುಲ! II


ನೋಡೆನ್ನ ಬಾಧೆ ಬವಣೆಗಳನು I ತೊಡೆದು ಹಾಕೆನ್ನ ಪಾಪಗಳನು II


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ಸಮಾಧಿಯನ್ನೇ ‘ನನ್ನ ತಂದೆ’ ಎಂದು ಕರೆದೆನಾದರೆ ಹುಳುವನ್ನೇ ‘ನನ್ನ ತಾಯಿ, ನನ್ನ ತಂಗಿ’ ಎಂದೆನಾದರೆ.


ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.


ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.


ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ನನ್ನನ್ನು ಸುರಿಸಿದೆ ಹಾಲಿನಂತೆ ಹೆಪ್ಪುಗಟ್ಟಿಸಿದೆ ಮೊಸರಿನಂತೆ;


ನೋಡು, ನಾನು ಕೂಡ ಜೇಡಿಮಣ್ಣಿನಿಂದ ರೂಪಿತನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇರುವವನು.


ಸಮಸ್ತಜನರು ಒಟ್ಟಾಗಿ ಅಳಿದುಹೋಗುವರು ಮರಳಿ ಮನುಷ್ಯರೆಲ್ಲರೂ ಮಣ್ಣಾಗಿ ಮಾರ್ಪಡುವರು.


ನೆನೆದುಕೊಂಡನಾತ ಅವರು ಕೇವಲ ನರರೆಂದು I ತಿಳಿದುಕೊಂಡನು ಮರಳಿಬಾರದ ಉಸಿರವರೆಂದು II


ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II


ಏಕೆನೆ, ನಮ್ಮ ಸ್ವಭಾವವನು ಆತನು ಬಲ್ಲ I ನಾವು ಹುಡಿಮಣ್ಣೆಂದವನಿಗೆ ತಿಳಿದಿದೆಯಲ್ಲಾ II


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು