Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ಮಾತ್ರ ನೀನು ತಲೆಯೆತ್ತಬಲ್ಲೆ ಗೌರವದಿಂದ ಸ್ಥಿರಚಿತ್ತನಾಗಿರಬಲ್ಲೆ ನಿರ್ಭಯದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು, ಸ್ಥಿರಚಿತ್ತನೂ, ನಿರ್ಭಯನೂ ಆಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು ಸ್ಥಿರಚಿತ್ತನೂ ನಿರ್ಭಯನೂ ಆಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ನೀನು ಖಂಡಿತವಾಗಿ ನಾಚಿಕೆಯಿಲ್ಲದೆ ತಲೆಯೆತ್ತುವೆ; ಸ್ಥಿರವಾಗಿ ನಿಂತುಕೊಂಡು ನಿರ್ಭಯದಿಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀನು ದೋಷದಿಂದ ಬಿಡುಗಡೆಯಾಗಿ ನಿನ್ನ ಮುಖವನ್ನು ಎತ್ತುವಿ; ಹೌದು, ನೀನು ಸ್ಥಿರವಾಗಿದ್ದು, ಹೆದರದೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:15
16 ತಿಳಿವುಗಳ ಹೋಲಿಕೆ  

ಆಗ ನೀನು ಸರ್ವಶಕ್ತನಲಿ ಆನಂದಿಸುವೆ ತಲೆಯೆತ್ತಿ ದೇವರಿಗೆ ಅಭಿಮುಖಿಯಾಗುವೆ.


ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಇದೆ ದೃಢಭರವಸೆ; ಆತನ ಮಕ್ಕಳಿಗೆ ಆಶ್ರಯ ಇದ್ದೇ ಇರುತ್ತದೆ.


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ನಾನು ದುರ್ಮಾರ್ಗಿಯಾದರಂತೂ ನನಗಿಲ್ಲ ಗತಿ ಸನ್ಮಾರ್ಗಿಯಾದರೂ ಕೂಡ ನಡೆವಂತಿಲ್ಲ ತಲೆಯೆತ್ತಿ ಏಕೆಂದರೆ ನಾಚಿ ನಿಂತಿರುವೆ, ಯಾತನೆಯ ಹೊರೆಹೊತ್ತಿ.


ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.


ಸೇನೆ ಸಮೇತ ಶತ್ರು ಬಂದರೂ ಎದೆಗುಂದೆನು I ಸಮರಕ್ಕೆರಗಿದರೂ ನಾ ಭರವಸೆಯಿಂದಿರುವೆನು II


ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ I ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು