Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:18 - ಕನ್ನಡ ಸತ್ಯವೇದವು C.L. Bible (BSI)

18 ನಂಬಿಕೆಯಿಂದಿರುವುದರಿಂದ ಧೈರ್ಯದಿಂದಿರುವೆ ಸುತ್ತಲು ಸುರಕ್ಷಿತನಾಗಿ ನೆಮ್ಮದಿಯಿಂದ ಮಲಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿರೀಕ್ಷೆಗೆ ಆಸ್ಪದವಿರುವುದರಿಂದ ಧೈರ್ಯಗೊಂಡಿರುವಿ, ಸುತ್ತಲೂ ನೋಡಿ ಅಪಾಯವಿಲ್ಲವೆಂದು ವಿಶ್ರಮಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿರೀಕ್ಷೆಗೆ ಆಸ್ಪದವಿರುವದರಿಂದ ಧೈರ್ಯಗೊಂಡಿರುವಿ, ಸುತ್ತಲೂ ನೋಡಿ ಅಪಾಯವಿಲ್ಲವೆಂದು ವಿಶ್ರವಿುಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಬನೇ, ನಿನಗೆ ನಿರೀಕ್ಷೆಯಿರುವುದರಿಂದ ಸುರಕ್ಷಿತನಾಗಿರುವೆ. ಆತನು ನಿನ್ನನ್ನು ಪರಿಪಾಲಿಸುತ್ತಾ ನಿನಗೆ ವಿಶ್ರಾಂತಿಯನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ನಿರೀಕ್ಷೆ ಇದೆ ಎಂದು ಭರವಸೆಯಿಂದ ಇರುವಿ; ನೀನು ನಿನ್ನ ಬಗ್ಗೆ ಯೋಚಿಸಿ ಭರವಸೆಯಿಂದ ವಿಶ್ರಾಂತಿ ತೆಗೆದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:18
14 ತಿಳಿವುಗಳ ಹೋಲಿಕೆ  

ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II


ಹಾಯಾಗಿ ಮಲಗಿ ನಿದ್ರಿಸುವೆನು I ಸುಖಿಯಾಗಿ ಮರಳಿ ಎದ್ದೇಳುವೆನು I ಕಾಯ್ದು ಕಾಪಾಡುವನು ಪ್ರಭು ನನ್ನನು II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ನನ್ನ ದಿನಗಳು ಮಗ್ಗದ ಲಾಳಕ್ಕಿಂತ ತ್ವರಿತ ಅವುಗಳಿಗಿದೋ ನಿರೀಕ್ಷೆಯಿಲ್ಲದ ಮುಕ್ತಾಯ.


ನಾನು ನಿರೀಕ್ಷೆಯಿಂದಿರಲು ನನಗಾಧಾರವೇನು? ನಾನು ತಾಳ್ಮೆಯಿಂದಿರಲು ನನ್ನ ಅಂತ್ಯಸ್ಥಿತಿಯೇನು?


ಆಗ ನಿನ್ನ ಬಾಳು ನಡುಹಗಲಿಗಿಂತ ಪ್ರಜ್ವಲ ಕತ್ತಲು ಕೂಡ ಪ್ರಾತಃಕಾಲದಂತೆ ಉಜ್ವಲ!


ಆಗ ನೀನು ವಿಶ್ರಮಿಸುವೆ ಹೆದರಿಕೆಯಿಲ್ಲದೆ ಅನೇಕರಿಗೆ ಬೇಕಾಗುವುದು ನಿನ್ನ ಮುಖಪ್ರಸನ್ನತೆ.


ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು