Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:2 - ಕನ್ನಡ ಸತ್ಯವೇದವು C.L. Bible (BSI)

2 “ಇಷ್ಟೆಲ್ಲ ಮಾತುಗಳಿಗೆ ತಕ್ಕ ಉತ್ತರ ಬೇಡವೆ? ಮಾತಿನಮಲ್ಲನು ನೀತಿವಂತ ಎನಿಸಿಕೊಳ್ಳುವನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ? ವ್ಯರ್ಥವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಹಳ ಮಾತುಗಳಿಗೆ ಉತ್ತರಕೊಡಬಾರದೋ? ಹರಟೇಮಲ್ಲನು ನೀತಿವಂತನೆಂದು ಹೇಳಿಸಿಕೊಂಡಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಮಾತುಗಳ ಈ ಪ್ರವಾಹಕ್ಕೆ ಯಾರಾದರೊಬ್ಬರು ಉತ್ತರ ಕೊಡಬೇಕು! ಇಷ್ಟೆಲ್ಲಾ ಮಾತುಗಳು ಯೋಬನನ್ನು ನೀತಿವಂತನನ್ನಾಗಿ ಮಾಡುತ್ತವೆಯೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಬಾಯಿ ಬಡುಕನು ನೀತಿವಂತನೆಂದು ಎನಿಸಿಕೊಳ್ಳುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:2
11 ತಿಳಿವುಗಳ ಹೋಲಿಕೆ  

ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.


“ಯೋಬನೇ, ಇನ್ನೆಷ್ಟರವರೆಗೆ ಮಾತುಗಳಿಗಾಗಿ ಹೊಂಚುಹಾಕುತ್ತಿರುವೆ? ಮೊದಲು ಆಲೋಚಿಸಿನೋಡು, ಆಮೇಲೆ ಬಾ ಮಾತುಕತೆಗೆ.


ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.


ಉಳಿಯದಿರಲಿ ನಾಡೊಳು ಚಾಡಿಕೋರರು I ಕೇಡಿಂದ ನಾಶವಾಗಲಿ ಹಿಂಸಕರು II


ನಿಮ್ಮ ಗಾಳಿಮಾತುಗಳಿಗೆ ಇತಿಮಿತಿ ಬೇಡವೇನು? ಇಂಥ ಉತ್ತರ ಕೊಡಲು ನಿಮ್ಮನ್ನು ಒತ್ತಾಯಪಡಿಸಿದ್ದೇನು?


“ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವೆ? ಬಿರುಗಾಳಿಯಂಥ ಮಾತುಗಳನ್ನಾಡುತ್ತಿರುವೆ?


ಆಗ ನಾಮಾಥ್ಯನಾದ ಚೋಫರನು ಹೀಗೆಂದ:


“ಬುದ್ಧಿವಂತನು ಗಾಳಿಮಾತನ್ನಾಡುವುದು ಸರಿಯೆ? ಸುಡುಗಾಳಿಯಿಂದ ಹೊಟ್ಟೆ ತುಂಬಿಸಿಕೊಳ್ಳಬಹುದೇ?


ಚಿಂತೆ ಹೆಚ್ಚಾದರೆ ಕನಸು ಕಾಣಿಸಿಕೊಳ್ಳುತ್ತದೆ. ಮಾತು ಹೆಚ್ಚಾದರೆ ಹುಚ್ಚುತನ ಹೊರಬರುತ್ತದೆ.


ನೀನು ದೇವಾಲಯವನ್ನು ಪ್ರವೇಶಿಸುವಾಗ ಎಚ್ಚರಿಕೆವಹಿಸು. ಮೂಢರು ಅರ್ಪಿಸುವ ಬಲಿಗಿಂತ ದೇವರ ಸಾನ್ನಿಧ್ಯ ಸೇರಿ ಕಿವಿಗೊಟ್ಟು ಆಲಿಸುವುದು ಲೇಸು. ತಾವು ಮಾಡುವುದು ಸರಿಯಲ್ಲ ಎಂದು ಆ ಮೂಢರಿಗೆ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು