Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:3 - ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ವಾಕ್ ಚಮತ್ಕಾರಕ್ಕೆ ಜನ ಬಾಯಿಮುಚ್ಚಿಕೊಳ್ಳಬೇಕೆ? ನಿನ್ನ ಕುಚೋದ್ಯಕ್ಕೆ ನಿನಗಾಗಬೇಡವೆ ನಾಚಿಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಬಡಾಯಿಕೊಚ್ಚಿದರೆ ಮನುಷ್ಯರು ಸುಮ್ಮನಿರಬೇಕೋ? ನೀನು ಕುಚೋದ್ಯವಾಗಿ ಮಾತನಾಡುವಾಗ ನಿನ್ನನ್ನು ಯಾರೂ ನಾಚಿಕೆಗೆ ಒಳಪಡಿಸಬಾರದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಬಡಾಯಿಕೊಚ್ಚಿದರೆ ಮನುಷ್ಯರು ಸುಮ್ಮನಿರಬೇಕೋ? ನೀನು ಕುಚೋದ್ಯವಾಗಿ ಮಾತಾಡುವಾಗ ನಿನ್ನನ್ನು ಯಾರೂ ನಾಚಿಕೆಪಡಿಸಕೂಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋಬನೇ, ಅರ್ಥರಹಿತವಾದ ನಿನ್ನ ಮಾತುಗಳಿಗೆ ನಮ್ಮಲ್ಲಿ ಉತ್ತರವೇ ಇಲ್ಲವೆಂದು ಆಲೋಚಿಸಿಕೊಂಡಿರುವೆಯಾ? ನೀನು ದೇವರನ್ನು ಅಪಹಾಸ್ಯ ಮಾಡುವಾಗ ಯಾರೂ ನಿನ್ನನ್ನು ಎಚ್ಚರಿಸುವುದಿಲ್ಲ ಎಂದುಕೊಂಡಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನ ವ್ಯರ್ಥ ಮಾತಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ಖಂಡಿಸುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:3
14 ತಿಳಿವುಗಳ ಹೋಲಿಕೆ  

ಚೇಷ್ಟೆಗಾರರಿದ್ದಾರೆ ನನ್ನ ಸುತ್ತಮುತ್ತ ನನ್ನ ಕಣ್ಮುಂದಿದೆ ಸದಾ ಅವರ ಕೆಣಕಾಟ.


“ತಮ್ಮ ದುರಿಚ್ಛೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅವರು ಎಚ್ಚರಿಸಿದ್ದಾರೆ.


ಈ ಪತ್ರದ ಮೂಲಕ ನಾವು ಹೇಳಿರುವ ಮಾತನ್ನು ಯಾರಾದರೂ ಕೇಳದಿದ್ದರೆ, ಅಂಥವನನ್ನು ಗುರುತಿಸಿ ಅವನ ಸಹವಾಸವನ್ನೇ ತೊರೆದುಬಿಡಿ. ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.


ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ.


ಕವಿಯಲಿ ಅವಮಾನ ನಿಂದೆ ಇವರ ಮುಖವನು I ಅರಸುವರಾಗ ಪ್ರಭೂ, ನಿನ್ನ ಸಿರಿನಾಮವನು II


ಅಣಕಿಸಿ ಹಾಸ್ಯಮಾಡಿದರು ಕೀಟಲೆಗಾರರಂತೆ I ಕಟಕಟನೆ ಹಲ್ಲುಕಡಿದರು ಕಡುಕೋಪಿಗಳಂತೆ II


ಈ ಯೋಬನಂಥ ಮನುಜನು ಯಾರಿದ್ದಾನೆ? ಇಗೋ, ದೇವದೂಷಣೆಯನು ನೀರಿನಂತೆ ಕುಡಿಯುತ್ತಾನೆ!


ಈ ಮಾತು ಅಬದ್ಧವೆಂದು ಯಾರು ಸ್ಥಾಪಿಸಬಲ್ಲರು? ನಾನು ಸುಳ್ಳುಗಾರನೆಂದು ನಿಮ್ಮಲ್ಲಿ ಯಾರು ತೋರಿಸಬಲ್ಲನು?”


ನಾನು ಮಾತಾಡುವಾಗ ತಾಳ್ಮೆಯಿಂದಿರಿ ಬಳಿಕ ಬೇಕಾದರೆ ಪರಿಹಾಸ್ಯ ಮಾಡಿ.


ದೇವರು ನಿಮ್ಮನ್ನು ಪರಿಶೋಧಿಸಿದರೆ ನಿಮಗೆ ಒಳಿತೆ? ಮನುಷ್ಯರಂತೆ ಆತನನ್ನು ಮೋಸಗೊಳಿಸಲಾದೀತೆ?


ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.


ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು