Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:6 - ಕನ್ನಡ ಸತ್ಯವೇದವು C.L. Bible (BSI)

6 ಜ್ಞಾನದ ರಹಸ್ಯಗಳನು ದೇವರೇ ನಿನಗೆ ತಿಳಿಸಲಿ ಸುಜ್ಞಾನ ಬಹುಮುಖವಾದುದೆಂದು ಆತನೇ ತೋರಿಸಲಿ ನಿನ್ನ ದೋಷಗಳನ್ನೆಲ್ಲ ಆತ ಲಕ್ಷಿಸಿಲ್ಲ ಎಂಬುದು ನಿನಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ, ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ನಿನಗೆ ಜ್ಞಾನದ ರಹಸ್ಯಗಳನ್ನು ತಿಳಿಸಿ ಜ್ಞಾನಕ್ಕೆ ಎರಡು ಮುಖಗಳಿವೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು. ದೇವರು ನಿನಗೆ ತಕ್ಕ ದಂಡನೆಯನ್ನು ವಿಧಿಸಿಲ್ಲವೆಂಬುದು ನಿನಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜ್ಞಾನದ ಮರ್ಮಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು, ನಿಜ ಜ್ಞಾನಕ್ಕೆ ಎರಡು ಬದಿಗಳಿವೆ; ದೇವರು ನಿನ್ನ ಪಾಪಗಳನ್ನು ತಮ್ಮ ಲಕ್ಷ್ಯಕ್ಕೆ ತರಲಿಲ್ಲ ಎಂದು ತಿಳಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:6
21 ತಿಳಿವುಗಳ ಹೋಲಿಕೆ  

ನಮ್ಮ ದುಷ್ಕರ್ಮ ಹಾಗು ಮಹಾಪರಾಧಗಳ ನಿಮಿತ್ತ ಇಷ್ಟೆಲ್ಲಾ ಕೇಡು ಬಂದಿದ್ದರೂ, ನಮ್ಮ ದೇವರಾದ ನೀವು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟುಮಂದಿಯನ್ನು ಉಳಿಸಿದ್ದೀರಿ;


ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.


ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.


“ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.


ಆದರೆ ರಹಸ್ಯಗಳನ್ನು ವ್ಯಕ್ತಪಡಿಸಬಲ್ಲವರು ಒಬ್ಬರಿದ್ದಾರೆ. ಅವರೇ ಪರಲೋಕದಲ್ಲಿರುವ ದೇವರು. ಬರಲಿರುವ ಕಾಲದಲ್ಲಿ ನಡೆಯತಕ್ಕದ್ದನ್ನು ರಾಜ ನೆಬೂಕದ್ನೆಚ್ಚರರಾದ ನಿಮಗೆ ಅವರೇ ತಿಳಿಯಪಡಿಸಿದ್ದಾರೆ. ನೀವು ಕಂಡ ಕನಸು, ಹಾಸಿಗೆಯ ಮೇಲೆ ಮಲಗಿದ್ದಾಗ ನಿಮ್ಮ ಮನಸ್ಸಿಗೆ ತೋಚಿದ ಸ್ವಪ್ನಗಳು ಹೀಗಿವೆ:


ದೇವರ ಆಲೋಚನಾಸಭೆಯಲಿ ನೀನು ಭಾಗವಹಿಸಿದ್ದೆಯೋ? ಜ್ಞಾನವೆಂಬುದು ನಿನಗೆ ಮಾತ್ರ ಮೀಸಲೋ?


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಕೇವಲವಾಯಿತೋ ನಿನಗೆ ದೇವರಿತ್ತ ಸಾಂತ್ವನ? ನಿನಗೆ ದೊರೆತ ಮೃದುವಾದ ಹಿತವಚನ?


ನಿನ್ನ ಪಾಪವೆ ನಿನಗೆ ಮಾತನು ಕಲಿಸಿಕೊಟ್ಟಿದೆ ಕಪಟಿಗಳಾಡುವ ನುಡಿಯನೆ ನೀನು ಆರಿಸಿಕೊಂಡಿರುವೆ.


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ I ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ II


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಆದರೆ ದೇವರೇ ಬಾಯ್ದೆರೆದು ನಿನಗೆ ವಿರುದ್ಧ ಮಾತನಾಡಿದರೆ ಒಳಿತು!


ಆದರೆ ದೇವರಲ್ಲಿದೆ ಜ್ಞಾನದೊಡನೆ ಶಕ್ತಿಕೂಡ ಆತನಲ್ಲಿದೆ ವಿವೇಕ ಮತ್ತು ಸನ್ಮತಿ ಸಹ.


ಇಲ್ಲ,ಹಾಗೆಮಾಡುವುದು ನಿನ್ನ ಕೆಟ್ಟತನ ಹೆಚ್ಚಿದುದಕ್ಕಾಗಿ. ನಿನ್ನ ಪಾಪಗಳಿಗೆ ಮಿತಿಯಿಲ್ಲದುದಕ್ಕಾಗಿ.


ಹೀಗೆ ನೀನು ನುಡಿದದ್ದು ಸರಿಯಲ್ಲವೆಂಬುದೇ ನನ್ನ ಉತ್ತರ; ದೇವರು ಮನುಷ್ಯರಿಗಿಂತ ದೊಡ್ಡವನು ಎಂಬುದೇ ಇದಕ್ಕೆ ಆಧಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು