Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:7 - ಕನ್ನಡ ಸತ್ಯವೇದವು C.L. Bible (BSI)

7 ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲಿಯಾ? ಸರ್ವಶಕ್ತನನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನೀನು ದೇವರ ರಹಸ್ಯಗಳನ್ನು ಅರ್ಥಮಾಡಿಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರ ಜ್ಞಾನದ ಮೇರೆಗಳನ್ನು ತಿಳಿದುಕೊಳ್ಳಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನೀನು ದೇವರ ರಹಸ್ಯಗಳನ್ನು ಕಂಡುಕೊಳ್ಳುವಿಯಾ? ಸರ್ವಶಕ್ತರ ಮಿತಿಯನ್ನು ನಿನ್ನಿಂದ ಪರೀಕ್ಷಿಸಲಾದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:7
23 ತಿಳಿವುಗಳ ಹೋಲಿಕೆ  

ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.


ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.


ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


“ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.


ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ದೇವರ ಅದ್ಭುತಗಳಲ್ಲಿ ಇವು ಕೆಲವು ಮಾತ್ರ ಆತನ ಬಗ್ಗೆ ನಾವು ಕೇಳಿರುವುದು ಕಿಂಚಿತ್ತು ಮಾತ್ರ ಆತನ ಘನ ಗರ್ಜನೆಯ ಪ್ರಾಬಲ್ಯವನ್ನು ಗ್ರಹಿಸಲು ಯಾರಿಂದ ಸಾಧ್ಯ?”


ದೇವರು ಉನ್ನತ ಆಕಾಶದಲ್ಲಿ ಇದ್ದಾನಲ್ಲವೇ? ನಕ್ಷತ್ರಗಳನ್ನು ನೋಡು, ಎಷ್ಟು ಗಹನವಾಗಿವೆ!


ಹೀಗೆ ನೀನು ನುಡಿದದ್ದು ಸರಿಯಲ್ಲವೆಂಬುದೇ ನನ್ನ ಉತ್ತರ; ದೇವರು ಮನುಷ್ಯರಿಗಿಂತ ದೊಡ್ಡವನು ಎಂಬುದೇ ಇದಕ್ಕೆ ಆಧಾರ.


ಆತ ನಿನ್ನ ಯಾವ ಮಾತಿಗೂ ಉತ್ತರ ಕೊಡಲಿಲ್ಲ ಎಂದ ಮಾತ್ರಕ್ಕೆ ನೀನು ಆತನೊಡನೆ ವ್ಯಾಜ್ಯವಾಡುವುದು ಸರಿಯಲ್ಲ.


ದೇವರೆನಿತೋ ಮಹೋನ್ನತನು ನಮ್ಮ ಅರಿವಿಗಾತನು ಎಟುಕನು ಅಸಂಖ್ಯಾತ ಆತನ ವರುಷಗಳು.


ದೇವರಕಂಠ ತನ್ನ ಅದ್ಭುತಕಾರ್ಯಗಳನು ಘೋಷಿಸುತ್ತದೆ ನಮ್ಮಿಂದರಿಯಲಾಗದ ಮಹಾತ್ಕಾರ್ಯಗಳನು ಎಸಗುತ್ತಾನೆ.


ಮಹೋನ್ನತವೂ ನಿಗೂಢವೂ ಆದ ತತ್ವವನ್ನು ಅರಿತುಕೊಳ್ಳಬಲ್ಲವರಾರು?


ದೇವರ ಹಸ್ತಬಲವನು ಕುರಿತು ಬೋಧಿಸುವೆನು ಸರ್ವಶಕ್ತನ ಯೋಜನೆಯನು ನಿಮಗೆ ಮರೆಮಾಚೆನು.


ಗಗನ ಮಂಡಲವನು ಕಣ್ಣೆತ್ತಿ ನೋಡು ನಿನಗೂ ಎಷ್ಟೋ ಎತ್ತರವಾದ ಮೇಘ ಮಾರ್ಗವನು ದಿಟ್ಟಿಸಿ ನೋಡು.


‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ.


ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II


ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು