Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:8 - ಕನ್ನಡ ಸತ್ಯವೇದವು C.L. Bible (BSI)

8 ಅದು ಆಕಾಶಕ್ಕಿಂತಲೂ ಎತ್ತರ; ನಿನ್ನಿಂದೇನು ಮಾಡಲು ಸಾಧ್ಯ? ಅದು ಪಾತಾಳಕ್ಕಿಂತಲೂ ಆಳ; ನಿನ್ನಿಂದ ಹೇಗೆ ತಿಳಿಯಲು ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಹಾ, [ಆತನ ಜ್ಞಾನವು] ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನ ಜ್ಞಾನವು ಆಕಾಶಕ್ಕಿಂತಲೂ ಉನ್ನತವಾಗಿದೆ; ಅದನ್ನು ಅರ್ಥಮಾಡಿಕೊಳ್ಳಲು ನಿನಗೆ ಸಾಧ್ಯವೇ ಇಲ್ಲ. ಅದು ಮೃತ್ಯುಲೋಕಕ್ಕಿಂತಲೂ ಆಳವಾಗಿದೆ. ನೀನು ಅದನ್ನು ಗ್ರಹಿಸಿಕೊಳ್ಳಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದು ಆಕಾಶಕ್ಕಿಂತಲೂ ಎತ್ತರವಾಗಿದೆ; ಆಗ ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳವಾಗಿದೆ; ಆಗ ನೀನೇನು ತಿಳುಕೊಳ್ಳುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:8
17 ತಿಳಿವುಗಳ ಹೋಲಿಕೆ  

ದೇವರು ಉನ್ನತ ಆಕಾಶದಲ್ಲಿ ಇದ್ದಾನಲ್ಲವೇ? ನಕ್ಷತ್ರಗಳನ್ನು ನೋಡು, ಎಷ್ಟು ಗಹನವಾಗಿವೆ!


ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.


“ಎಷ್ಟೋ ಉನ್ನತ ಆಕಾಶವು ಭೂಮಿಯಿಂದ ಅಷ್ಟೂ ಉನ್ನತ ನನ್ನ ಮಾರ್ಗ ನಿಮ್ಮ ಮಾರ್ಗಗಳಿಗಿಂತ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ.


ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I ಆತನ ಮಹತ್ತಾದ ಏಕೈಕ ನಾಮವನು II


ಗಗನ ಮಂಡಲವನು ಕಣ್ಣೆತ್ತಿ ನೋಡು ನಿನಗೂ ಎಷ್ಟೋ ಎತ್ತರವಾದ ಮೇಘ ಮಾರ್ಗವನು ದಿಟ್ಟಿಸಿ ನೋಡು.


ಪಾತಾಳ ತೆರೆದಿದೆ ದೇವರ ದೃಷ್ಟಿಗೆ ಅಧೋಲೋಕ ಮರೆಯಾಗಿಲ್ಲ ಆತನಿಗೆ.


ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II


“ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಮೋಡ ಕರಗಿ ಮಾಯವಾಗುವಂತೆ ಪಾತಾಳಕ್ಕಿಳಿದವನು ಬಾರನು ಮತ್ತೆ.


ಅದು ಭೂಮಿಗಿಂತಲು ಉದ್ದ ಸಮುದ್ರಕ್ಕಿಂತಲು ಅಗಲ.


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ಮರಣದ ದ್ವಾರಗಳು ನಿನಗೆ ಗೋಚರವಾಗಿರುವುವೋ? ಘೋರಾಂಧಕಾರದ ಕದಗಳನ್ನು ನೀನು ಕಂಡಿರುವೆಯೋ?


ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II


ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು