Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:13 - ಕನ್ನಡ ಸತ್ಯವೇದವು C.L. Bible (BSI)

13 ಆದರೆ ದೇವರಲ್ಲಿದೆ ಜ್ಞಾನದೊಡನೆ ಶಕ್ತಿಕೂಡ ಆತನಲ್ಲಿದೆ ವಿವೇಕ ಮತ್ತು ಸನ್ಮತಿ ಸಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ, ವಿವೇಕವೂ ಆತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ ವಿವೇಕವೂ ಆತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜ್ಞಾನವೂ ಶಕ್ತಿಯೂ ಆತನವೇ. ಆಲೋಚನೆಯೂ ವಿವೇಕವೂ ಆತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಜ್ಞಾನವೂ, ಶಕ್ತಿಯೂ ದೇವರಲ್ಲಿವೆ; ಸಮಾಲೋಚನೆಯೂ, ಗ್ರಹಿಕೆಯೂ ದೇವರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:13
23 ತಿಳಿವುಗಳ ಹೋಲಿಕೆ  

ದೇವರು ಸರ್ವಶಕ್ತನು, ಯಾರನ್ನೂ ತುಚ್ಛೀಕರಿಸನು ಆತನ ಬುದ್ಧಿಸಾಮರ್ಥ್ಯ ಅಪಾರವಾದುದು.


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.


ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರ! ಏಕೆಂದರೆ ಜ್ಞಾನವೂ ಶಕ್ತಿಯೂ ಆತನಿಗೆ ಸ್ವಂತ.


ನಮ್ಮ ಪ್ರಭು ಘನವಂತ, ಪರಾಕ್ರಮಿ I ಅಪರಿಮಿತವಾದುದು ಆತನ ಜ್ಞಾನನಿಧಿ II


ಜ್ಞಾನದ ರಹಸ್ಯಗಳನು ದೇವರೇ ನಿನಗೆ ತಿಳಿಸಲಿ ಸುಜ್ಞಾನ ಬಹುಮುಖವಾದುದೆಂದು ಆತನೇ ತೋರಿಸಲಿ ನಿನ್ನ ದೋಷಗಳನ್ನೆಲ್ಲ ಆತ ಲಕ್ಷಿಸಿಲ್ಲ ಎಂಬುದು ನಿನಗೆ ತಿಳಿದಿರಲಿ.


ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.


“ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು?


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ಜ್ಞಾನವನು ದಯಪಾಲಿಸಿದವನಾರು ಇಬಿಸ್ ಪಕ್ಷಿಗೆ? ವಿವೇಕವನು ಅನುಗ್ರಹಿಸಿದವನಾರು ಕೋಳಿಹುಂಜಕ್ಕೆ


ಸಾಮರ್ಥ್ಯ ಹಾಗು ವಿಜಯ ಆತನ ಲಕ್ಷಣ ವಂಚಕ ಹಾಗು ವಂಚಿತ ಆತನಿಗೆ ಅಧೀನ.


ಸಮುದ್ರವನು ಭೇದಿಸುತ್ತಾನೆ ಪರಾಕ್ರಮದಿಂದ ಘಟಸರ್ಪವನೂ ಹೊಡೆದು ಹಾಕುತ್ತಾನೆ ವಿವೇಕಶಕ್ತಿಯಿಂದ.


ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು