Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:17 - ಕನ್ನಡ ಸತ್ಯವೇದವು C.L. Bible (BSI)

17 ಮಂತ್ರಿಗಳನು ಬರಿಬತ್ತಲೆಯಾಗಿ ನಡೆಸುತ್ತಾನೆ ನ್ಯಾಯಾಧಿಪತಿಗಳನು ಮೂರ್ಖರನ್ನಾಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರು ಮಂತ್ರಿಗಳ ಜ್ಞಾನವನ್ನು ತೆಗೆದುಹಾಕುವನು. ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರು ಸಲಹೆಗಾರರನ್ನು ಸೆರೆಹಿಡಿಯುತ್ತಾರೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:17
10 ತಿಳಿವುಗಳ ಹೋಲಿಕೆ  

ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ದೇಶವು ದುರುಳರ ಕೈವಶವಾಗಿದ್ದರೂ ನ್ಯಾಯಾಧೀಶರ ಮುಖಕ್ಕೆ ಮುಸುಕುಹಾಕುತ್ತಾನೆ. ಇದನ್ನು ಮಾಡುವವರು ದೇವರಲ್ಲದೆ ಮತ್ತೆ ಯಾರು?


ಪಾಳು ಪೊಡವಿಯಲ್ಲಿ ನೆಲಮಾಳಿಗೆಗಳನ್ನು ನಿರ್ಮಿಸಿಕೊಂಡಿದ್ದ ರಾಜ-ಮಂತ್ರಿಗಳೊಡನೆ ನಾನಿರುತ್ತಿದ್ದೆ.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.


ನನ್ನ ಘನತೆಯನ್ನು ಸುಲಿದುಬಿಟ್ಟಿದ್ದಾನೆ ನನ್ನ ಕಿರೀಟವನ್ನು ಕಿತ್ತುಹಾಕಿದ್ದಾನೆ.


ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು