Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:22 - ಕನ್ನಡ ಸತ್ಯವೇದವು C.L. Bible (BSI)

22 ಇರುಳಿನ ಆಳದಲ್ಲಿರುವವುಗಳನ್ನು ಬೆಳಗಿಸುತ್ತಾನೆ ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಗಾಧವಿಷಯಗಳನ್ನು ಕತ್ತಲೊಳಗಿಂದ ಬೈಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕಾರ್ಗತ್ತಲೆಯೊಳಗಿರುವ ನಿಗೂಢ ರಹಸ್ಯಗಳನ್ನು ಆತನು ಪ್ರಕಟಿಸುವನು; ಮರಣಾಂಧಕಾರದ ಸ್ಥಳಗಳನ್ನು ಬೆಳಕಿನಿಂದ ಪ್ರಕಾಶಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರು ಕತ್ತಲೆಯೊಳಗಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾರೆ, ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:22
15 ತಿಳಿವುಗಳ ಹೋಲಿಕೆ  

ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.


ಕಾರ್ಮೋಡಗಳು ಅದನ್ನು ಕವಿಯಲಿ ಇರುಳೂ ಮರಣದ ನೆರಳೂ ಅದನ್ನು ಆಕ್ರಮಿಸಲಿ ಹಗಲನ್ನೇ ಮಬ್ಬಾಗಿಸುವ ಮುಸುಕು ಅದನ್ನು ಹೆದರಿಸಲಿ.


ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,


“ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು.


ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.


ಕತ್ತಲು ಕತ್ತಲಲ್ಲ ನಿನಗೆ I ಇರುಳೂ ಹಗಲಾಗಿದೆ ನಿನಗೆ I ಕತ್ತಲು, ಬೆಳಕು - ಒಂದೇ ನಿನಗೆ II


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ಅಂಥವರಿಗೆ ಕಾರ್ಗತ್ತಲೇ ಬೆಳಗಿನ ಜಾವ ಕಾರ್ಗತ್ತಲಿನ ಅಪಾಯಗಳೇ ಅವರಿಗೆ ಪರಿಚಯ.


ಜ್ಞಾನದ ರಹಸ್ಯಗಳನು ದೇವರೇ ನಿನಗೆ ತಿಳಿಸಲಿ ಸುಜ್ಞಾನ ಬಹುಮುಖವಾದುದೆಂದು ಆತನೇ ತೋರಿಸಲಿ ನಿನ್ನ ದೋಷಗಳನ್ನೆಲ್ಲ ಆತ ಲಕ್ಷಿಸಿಲ್ಲ ಎಂಬುದು ನಿನಗೆ ತಿಳಿದಿರಲಿ.


ಆಗ ಅವರಲ್ಲೊಬ್ಬನು, “ನನ್ನ ಒಡೆಯರಾದ ಅರಸೇ, ಹಾಗಲ್ಲ; ಇಸ್ರಯೇಲರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿದ್ದಾನೆ; ನೀವು ನಿಮ್ಮ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಯೇಲರ ಅರಸನಿಗೆ ತಿಳಿಸುತ್ತಾನೆ,” ಎಂದನು.


“ಕಾರ್ಗತ್ತಲೆನ್ನ ಕವಿಯಲಿ” ಎಂದರೂ I “ಸುತ್ತಲ ಬೆಳಕು ಇರುಳಾಗಲಿ” ಎಂದರೂ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು