Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:5 - ಕನ್ನಡ ಸತ್ಯವೇದವು C.L. Bible (BSI)

5 ದಲಿತರನ್ನು ಕಂಡರೆ ಸುಖಜೀವಿಗಳಿಗೆ ತಾತ್ಸಾರ ಜಾರಿ ಬೀಳಲಿರುವವರಿಗೆ ಕಾದಿದೆ ತಿರಸ್ಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನೆಮ್ಮದಿಯಿಂದಿರುವವನ ಯೋಚನೆ; ಜಾರಿ ಬಿದ್ದವರಿಗೆ ಅಪಮಾನವು ಕಾದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬದು ನೆಮ್ಮದಿಯಿಂದಿರುವವನ ಯೋಚನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಪತ್ತಿಗೆ ಗುರಿಯಾಗಿಲ್ಲದವರು ಆಪತ್ತಿನಿಂದ ಕಷ್ಟಪಡುತ್ತಿರುವ ಜನರನ್ನು ಗೇಲಿ ಮಾಡುವರು; ಜಾರಿಬಿದ್ದವನಿಗೆ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸುಖಜೀವಿಗಳಾಗಿರುವ ಜನರು ತೊಂದರೆಯಲ್ಲಿ ಇರುವವರನ್ನು ಅಪಹಾಸ್ಯ ಮಾಡುತ್ತಾರೆ, ಎಡವಿ ಬೀಳುವ ಜನರಿಗೆ ಕಾದಿದೆ ಆಪತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:5
16 ತಿಳಿವುಗಳ ಹೋಲಿಕೆ  

ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು.


ಸಜ್ಜನರ ಬೆಳಕು ಪ್ರಜ್ವಲಿಸುವುದು; ದುರ್ಜನರ ದೀಪವು ಆರಿಹೋಗುವುದು.


ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ I ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ II


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ಹೆತ್ತವರನ್ನು ಶಪಿಸುವವನ ದೀಪ ಕಾರಿರುಳಲ್ಲೆ ಆರಿಹೋಗುವುದು ಖಚಿತ.


ನನ್ನ ಕಾಲು ಜಾರಿಹೋಯಿತು ಎನ್ನುವುದರೊಳಗೆ I ನಿನ್ನ ಅಚಲ ಪ್ರೀತಿ, ಪ್ರಭು ನೆರವಾಯಿತೆನಗೆ II


ಹೌದು, ದುರುಳನ ದೀಪ ಆರಿಹೋಗುವುದು ಅವನ ಒಲೆಯು ಉರಿಯದೆ ಹೋಗುವುದು.


ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು.


ಹುಲ್ಲಿರಲು ಕಾಡುಕತ್ತೆ ಅರಚೀತೆ? ಮೇವಿರಲು ಗೂಳಿ ಎತ್ತು ಗುಟುರೀತೆ?


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.


ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು