Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:7 - ಕನ್ನಡ ಸತ್ಯವೇದವು C.L. Bible (BSI)

7 ಮೃಗಗಳನ್ನು ಬೇಕಾದರೆ ಕೇಳು, ಅವು ಕಲಿಸುವುವು ಆಕಾಶದ ಪಕ್ಷಿಗಳನ್ನು ಕೇಳು, ಅವು ತಿಳಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಆದರೆ ಪ್ರಾಣಿಗಳನ್ನು ಕೇಳು, ಅವು ನಿನಗೆ ಉಪದೇಶಿಸುತ್ತವೆ. ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಆದರೂ ಮೃಗಗಳನ್ನು ಕೇಳು, ಅವು ನಿನಗೆ ಬೋಧಿಸುವುವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:7
11 ತಿಳಿವುಗಳ ಹೋಲಿಕೆ  

ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


ಎಲೈ ಸೋಮಾರಿಯೇ, ಇರುವೆಯ ಬಳಿಗೆ ಹೋಗು; ಅದರ ನಡವಳಿಕೆಯನ್ನು ನೋಡಿ ಜ್ಞಾನಿಯಾಗು.


ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು.


ದೇವರು ಲೋಕವನ್ನು ಸೃಷ್ಟಿಸಿದಂದಿನಿಂದ ಅವರ ಅಗೋಚರ ಗುಣಲಕ್ಷಣಗಳು, ಅವರ ಅನಂತ ಶಕ್ತಿ ಮತ್ತು ದೈವಸ್ವಭಾವ ಮನುಷ್ಯರಿಗೆ ಸೃಷ್ಟಿಗಳ ಮೂಲಕವೇ ವೇದ್ಯವಾಗುತ್ತಿವೆ. ಆದುದರಿಂದ ಮಾನವರು ತಮ್ಮ ಅಜ್ಞಾನಕ್ಕೆ ಯಾವ ನೆಪವನ್ನು ಒಡ್ಡಲೂ ಸಾಧ್ಯವಿಲ್ಲ.


ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು!


ಕ್ರಿಮಿಕೀಟಗಳನ್ನು ಕೇಳು, ಅವು ನಿನಗೆ ಬೋಧಿಸುವುವು ಸಮುದ್ರದ ಮೀನುಗಳು ನಿನಗೆ ಉಪದೇಶ ಮಾಡುವುವು.


ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು.


ಎಲ್ಲ ತರದ ದೊಡ್ಡ - ಚಿಕ್ಕ ಕಾಡುಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನು ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು.


ನಿನಗೆ ಬೋಧಿಸಿ ಬುದ್ಧಿಹೇಳುವರು ಪೂರ್ವಜರು ಅವರ ಅನುಭವದಿಂದ ಬಂದ ವಚನಗಳಿವು:


ಚಿಕ್ಕವು ಆದರೂ ದೊಡ್ಡ ಜ್ಞಾನವುಳ್ಳ ನಾಲ್ಕು ಜಂತುಗಳುಂಟು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು