Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:11 - ಕನ್ನಡ ಸತ್ಯವೇದವು C.L. Bible (BSI)

11 ಆತನ ಪ್ರತಿಭೆ ನಿಮ್ಮನ್ನು ಹೆದರಿಸದೋ? ದೈವಭಯವು ನಿಮ್ಮನ್ನು ಆವರಿಸದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನ ಶ್ರೇಷ್ಠತೆಯು ನಿಮ್ಮನ್ನು ಹೆದರಿಸುವುದಿಲ್ಲವೋ? ಆತನ ಭಯವು ನಿಮ್ಮ ಮೇಲೆ ಬೀಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನ ಶ್ರೇಷ್ಠತೆಯು ನಿಮ್ಮನ್ನು ಹೆದರಿಸುವದಿಲ್ಲವೋ? ಆತನ ಭಯವು ನಿಮ್ಮ ಮೇಲೆ ಬೀಳುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನ ಪ್ರಕಾಶಮಾನವಾದ ಮಹಿಮೆಯು ನಿಮ್ಮನ್ನು ಹೆದರಿಸುವುದಿಲ್ಲವೇ? ನೀವು ಆತನಿಗೆ ಭಯಪಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರ ವೈಭವವು ನಿಮ್ಮನ್ನು ಹೆದರಿಸುವುದಿಲ್ಲವೋ? ದೈವಭಯವು ನಿಮ್ಮ ಮೇಲೆ ಬೀಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:11
10 ತಿಳಿವುಗಳ ಹೋಲಿಕೆ  

ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗಿದೆ ಭಯ ಆತನ ಪ್ರಭಾವದ ನಿಮಿತ್ತ ಇಂಥ ಕೃತ್ಯ ನನಗೆ ದುಸ್ಸಾಧ್ಯ.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ಸೇನಾಧೀಶ್ವರ ಸ್ವಾಮಿಯಾದ ನಾನು ಪವಿತ್ರನೆಂದು ಎಣಿಸಿ ನನಗೆ ಭಯಭಕ್ತಿಯಿಂದ ಸನ್ಮಾನಮಾಡು, ನನಗೆ ಹೆದರು.


ಹಿಂತೆಗೆದುಕೊ ನನ್ನ ಮೇಲೆತ್ತಿರುವ ನಿನ್ನ ಕೈಗಳನು ಅಂಜಿಕೆಗೀಡು ಮಾಡದಿರಲಿ ನಿನ್ನ ದಿಗಿಲು ನನ್ನನು.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ನಿಮ್ಮ ಸ್ಮೃತಿಗಳು ಬೂದಿಯ ಸಾಮತಿಗಳು ನಿಮ್ಮ ವಾದಗಳು ಮಣ್ಣಿನ ಗೋಡೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು