Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:12 - ಕನ್ನಡ ಸತ್ಯವೇದವು C.L. Bible (BSI)

12 ನಿಮ್ಮ ಸ್ಮೃತಿಗಳು ಬೂದಿಯ ಸಾಮತಿಗಳು ನಿಮ್ಮ ವಾದಗಳು ಮಣ್ಣಿನ ಗೋಡೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮ್ಮ ಸ್ಮೃತಿಗಳು ಬೂದಿಗೆ ಸಮಾನವಾದ ಉದಾಹರಣೆ; ನಿಮ್ಮ ಕೋಟೆಯು ಬರೀ ಮಣ್ಣಿನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮ್ಮ ಸ್ಮೃತಿಗಳು ಬೂದಿಯ ಸಾಮತಿಗಳು; ನಿಮ್ಮ ಕೋಟೆಯು ಬರೀ ಮಣ್ಣಿನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವಾಡುವ ಸ್ಮರಣೀಯ ನುಡಿಗಳು ಬೂದಿಗೆ ಸಮಾನವಾಗಿವೆ. ನಿಮ್ಮ ವಾದಗಳು ಮಣ್ಣಿನಷ್ಟೇ ಬಲಹೀನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ನೀತಿವಚನಗಳು ಬೂದಿಯ ಗಾದೆಗಳು; ನಿಮ್ಮ ವಾದಗಳು ಬರೀ ಮಣ್ಣಿನ ಗೋಡೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:12
16 ತಿಳಿವುಗಳ ಹೋಲಿಕೆ  

ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ಮಡಿದುಹೋದರು ಆ ಒಡೆಯರೆಲ್ಲ ಮರಳಿ ಅವರ ಪ್ರೇತಗಳು ಎದ್ದುಬರುವಂತಿಲ್ಲ. ನೀನವರನು ಬಡಿದು ನಸುಕಿಹಾಕಿರುವೆ ಅವರ ನೆನಪನೆ ಅಳಿಸಿಹಾಕಿರುವೆ.


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ಅವರ ಪಾಪಗಳು ಪ್ರಭುವಿನ ನೆನಪಲ್ಲಿರಲಿ I ಅವನ ಹೆಸರೇ ಇಲ್ಲದಂತಾಗಲಿ ಧರೆಯಲಿ II


ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II


ದುರ್ಜನರಿಗಾದರೋ ಪ್ರಭು ವಿಮುಖನು I ಅವರ ಹೆಸರನು ಧರೆಯಿಂದ ಅಳಿಸುವನು II


ಅವನ ಸ್ಮರಣೆ ಅಳಿದುಹೋಗುವುದು ಜಗದಲಿ ಇಲ್ಲವಾಗುವುದು ಅವನ ಹೆಸರು ನಾಡಿನಲಿ.


ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?


ಆಗ ಸರ್ವೇಶ್ವರ, “ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು ಎಂಬ ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ ಮತ್ತು ಯೆಹೋಶುವನಿಗೆ ಮನದಟ್ಟಾಗುವಂತೆ ಮಾಡು” ಎಂದು ಮೋಶೆಗೆ ಹೇಳಿದರು.


ಆಗ ಅಬ್ರಹಾಮನು, “ನಾನಂತೂ ಮಣ್ಣುಬೂದಿ, ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ.


ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ಆತನ ಪ್ರತಿಭೆ ನಿಮ್ಮನ್ನು ಹೆದರಿಸದೋ? ದೈವಭಯವು ನಿಮ್ಮನ್ನು ಆವರಿಸದೋ?


ಸುಮ್ಮನಿರಿ, ನನ್ನನ್ನು ಮಾತಾಡಲು ಬಿಡಿ ನನ್ನ ಮೇಲೆ ಏನು ಬೇಕಾದರೂ ಬರಲಿ.


ಯೋಬನು ಮತ್ತೆ ಪ್ರಸ್ತಾಪವೆತ್ತಿ ಹೀಗೆಂದನು:


ಯೋಬನು ಮತ್ತೆ ಪ್ರಸ್ತಾಪವೆತ್ತಿ ಇಂತೆಂದನು:


ಇಂತಿರಲು ನಿಮ್ಮ ಉಪಶಮನದ ಮಾತು ವ್ಯರ್ಥ ನಿಮ್ಮ ಮಾತುಗಳ ಸಾರಾಂಶ ಮಿತ್ರದ್ರೋಹ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು