Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:15 - ಕನ್ನಡ ಸತ್ಯವೇದವು C.L. Bible (BSI)

15 ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೇತನವನ್ನು ಆತನ ಮುಂದೆ ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ನನ್ನನ್ನು ಕೊಂದರೂ ಆತನಲ್ಲಿಯೇ ಭರವಸವಿಟ್ಟಿರುವೆನು. ನನ್ನ ನಡತೆಯ ಕುರಿತು ಆತನ ಮುಂದೆ ವಾದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:15
20 ತಿಳಿವುಗಳ ಹೋಲಿಕೆ  

ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ಯಾವ ವಿಷಯದಲ್ಲಾದರೂ ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸಿದ್ದೇ ಆದರೆ ಎಲ್ಲವನ್ನೂ ಬಲ್ಲ ದೇವರು ನಮ್ಮ ಮನಸ್ಸಾಕ್ಷಿಗಿಂತಲೂ ದೊಡ್ಡವರೆಂಬುದು ನಮಗೆ ತಿಳಿದೇ ಇರುತ್ತದೆ.


ನೀವು ನ್ಯಾಯವಂತರೆಂದು ನಾನು ಒಪ್ಪಿದರೆ ನನಗಿರಲಿ ಧಿಕ್ಕಾರ! ನಾನು ಸತ್ಯತೆಯನ್ನು ಕಳೆದುಕೊಳ್ಳಲಾರೆ ಸಾಯುವ ತನಕ.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಇಗೋ ನನ್ನ ಮೊಕದ್ದಮೆಯನ್ನು ಸಿದ್ಧಗೊಳಿಸಲಾಗಿದೆ ನಾನು ನಿರ್ದೋಷಿಯೆಂಬ ನಿರ್ಣಯ ನನಗೆ ಗೊತ್ತೇ ಇದೆ.


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


“ಸರ್ವಶಕ್ತನೊಡನೆ ವ್ಯಾಜ್ಯವಾಡುವುದನು ಈಗಲಾದರು ನಿಲ್ಲಿಸುವೆಯಾ? ದೇವರೊಡನೆ ತರ್ಕಮಾಡುವಂಥ ನೀನು ಉತ್ತರಕೊಡುವೆಯಾ?”


ಇದು ನನಗೆ ನ್ಯಾಯ ದೊರಕಿಸಲಿ, ದೇವರ ಮುಂದೆ ತನ್ನ ಮಿತ್ರನಿಗಾಗಿ ಒಬ್ಬನು ವಾದಿಸುವಂತೆ.


ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.


ನನ್ನ ದಿನಗಳು ಮಗ್ಗದ ಲಾಳಕ್ಕಿಂತ ತ್ವರಿತ ಅವುಗಳಿಗಿದೋ ನಿರೀಕ್ಷೆಯಿಲ್ಲದ ಮುಕ್ತಾಯ.


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ಸರ್ವಶಕ್ತನೊಡನೆ ಮಾತಾಡಲು ನನಗಿದೆ ಆಸೆ ದೇವರೊಂದಿಗೆ ವಾದಿಸಲು ನನಗಿದೆ ಅಪೇಕ್ಷೆ.


ಆ ಮೀನಿನ ಹೊಟ್ಟೆಯೊಳಗಿಂದಲೇ ಯೋನನು ಸರ್ವೇಶ್ವರಸ್ವಾಮಿ ದೇವರಿಗೆ ಈ ರೀತಿ ಪ್ರಾರ್ಥನೆ ಮಾಡಿದನು:


ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು